ಉಡುಪಿ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುಜಿ ಕುರ್ಯ ಆಯ್ಕೆ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಉಡುಪಿ ಜಿಲ್ಲಾ ವಾರ್ತಾ ಇಲಾಖೆಯ ಅಧಿಕಾರಿ ಮಂಜುನಾಥ್ ಈ ಬಗ್ಗೆ ಇಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮೂವರು ಸ್ಪರ್ಧಿಸಿದ್ದು, ಇದರಲ್ಲಿ ಉದಯವಾಣಿ ಪತ್ರಿಕೆಯ ಫೋಟೋ ಜರ್ನಲಿಸ್ಟ್ ಆಸ್ಟ್ರೋ ಮೋಹನ್ 44 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.

ಅದೇ ರೀತಿ ಉಪಾಧ್ಯಕ್ಷರುಗಳಾಗಿ ಉಡುಪಿ ಮಿತ್ರ ಪತ್ರಿಕೆಯ ಸಂಪಾದಕ ಪ್ರಭಾಕರ ಆಚಾರ್ಯ ಚಿತ್ತೂರು, ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಉದಯ ಕುಮಾರ್ ಮುಂಡ್ಕೂರು, ಉದಯವಾಣಿ ಹೆಬ್ರಿ ವರದಿಗಾರ ಉದಯ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಗಳಾಗಿ ಜಯಕಿರಣ ಪತ್ರಿಕೆಯ ಉಡುಪಿ ವರದಿಗಾರ ಉಮೇಶ್ ಮಾರ್ಪಳ್ಳಿ, ಕರಾವಳಿ ಅಲೆ ವರದಿಗಾರ ಸುರೇಶ್ ಎರ್ಮಾಳ್ ಹಾಗೂ ಉದಯವಾಣಿ ಪತ್ರಿಕೆಯ ವರದಿಗಾರ ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಪ್ರಜ್ವಲ್ ಅಮೀನ್ ಟಿವಿ 9, ಜನಾರ್ದನ ಕೊಡವೂರು ಸಂಜೆ ಪ್ರಭ, ಚೇತನ್ ಮಟಪಾಡಿ ಪಬ್ಲಿಕ್ ಟಿವಿ, ಮುಹಮ್ಮದ್ ಶರೀಫ್ ವಾರ್ತಾಭಾರತಿ, ರಮಾನಂದ ಅಜೆಕಾರು ಕನ್ನಡ ಪ್ರಭ, ಯೋಗೀಶ್ ಕುಂಭಾಶಿ ವಾರ್ತಾಭಾರತಿ, ಬಿ.ರಾಘವೇಂದ್ರ ಪೈ ಹೊಸದಿಗಂತ, ಕೆ.ಚಂದ್ರಶೇಖರ್ ಚಾಲುಕ್ಯ, ಪ್ರಮೋದ್ ಸುವರ್ಣ ನಮ್ಮ ಕುಡ್ಲ, ವಿಜಯ ಆಚಾರ್ಯ ಉಚ್ಚಿಲ ಉದಯವಾಣಿ, ಪ್ರವೀಣ್ ಮುದ್ದೂರು ಉದಯವಾಣಿ, ಮೋಹನ್ ಉಡುಪ ವಿಜಯ ಕರ್ನಾಟಕ, ಸುಕುಮಾರ್ ಮುನಿಯಾಲು ಪ್ರಜಾವಾಣಿ ಅವರನ್ನು ಆಯ್ಕೆ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...