ಉಡುಪಿ | ಅ.22ರಂದು ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ; ‘ರಜತ ಕ್ರೀಡಾ ಸಂಭ್ರಮ’

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

- Advertisement -

ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ರಜತ ಸಂಭ್ರಮದ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟವನ್ನು ಅದ್ದೂರಿ ಹಾಗೂ ವಿಶಿಷ್ಟ ರೀತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಸಂಘದ ಧ್ವಜಾರೋಹಣವನ್ನು ನೆರವೇರಿಸಲಿರುವರು. ಇದೇ ಸಂದರ್ಭದಲ್ಲಿ ಕ್ರೀಡಾ ಕೂಟಕ್ಕೆ ಉಡುಪಿ ಜಿಲ್ಲಾ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಲಿರುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗ್ಗೆ 10.30ಕ್ಕೆ ಕ್ರೀಡಾಕೂಟವನ್ನು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಲಿರುವರು. ಇದೇ ಸಂದರ್ಭದಲ್ಲಿ ಪತ್ರಕರ್ತರ ದೀಪಕ್ ಜೈನ್ ನೇತೃತ್ವದಲ್ಲಿ ವಿವಿಧ ತಾಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಲಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಪತ್ರಕರ್ತ ರಾಜು ಖಾರ್ವಿ ನೇತೃತ್ವದಲ್ಲಿ ಪ್ರಜ್ವಲ್ ಅಮೀನ್ ಹಾಗೂ ಅನಿಲ್ ಕೈರಂಗಳ ಕ್ರೀಡಾ ಜ್ಯೋತಿ ಬೆಳಗಿಸಲಿದ್ದು, ಕ್ರೀಡಾಜ್ಯೋತಿಯನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ಹಸ್ತಾಂತರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಉದ್ಯಾವರ ಕುತ್ಪಾಡಿ ಯಶಸ್ವಿ ಫಿಶ್‌ಮಿಲ್ ನಿರ್ದೇಶಕರಾದ ಉದಯ ಕುಮಾರ್, ಉಡುಪಿ ನಗರಸಭೆ ಪೌರಾಯುಕ್ತರಾದ ರಾಯಪ್ಪ ಭಾಗವಹಿಸಲಿದ್ದಾರೆ. ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಶರೀಫ್ ಕಾರ್ಕಳ, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಗೌರವ ಉಪಸ್ಥಿತರಿರುವರು.

ಕ್ರೀಡಾಕೂಟದಲ್ಲಿ ಓಟ, ಉದ್ದ ಜಿಗಿತ, ರಿಲೇ, ಹಗ್ಗಜಗ್ಗಾಟ, ಮಡಕೆ ಒಡೆಯುವ ಸ್ಪರ್ಧೆ, ಸ್ಲೋ ಬೈಕ್ ರೇಸ್, ಈಜು ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 40 ವರ್ಷ ಕೆಳಗಿನ, 40 ವರ್ಷ ಮೇಲ್ಪಟ್ಟ ಹಾಗೂ 50 ವರ್ಷ ಮೇಲ್ಪಟ್ಟ ಒಟ್ಟು ಮೂರು ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯ ವಿಜೇತರಿಗೆ ವಿಶಿಷ್ಟ ರೀತಿಯಲ್ಲಿ ಸಿದ್ಧಪಡಿಸಿದ ವೇದಿಕೆಯಲ್ಲಿ ಪದಕ ನೀಡುವ ಮೂಲಕ ಗೌರವ ಸಲ್ಲಿಸಲಾಗುವುದು. ಅದೇ ರೀತಿ ನವೆಂಬರ್ ತಿಂಗಳಲ್ಲಿ ನಡೆಯುವ ರಜತ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವೇಶ್ವರ ಬ್ಯಾಂಕ್ ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಂಡಿದೆ: ಪ್ರಕಾಶ ತಪಶೆಟ್ಟಿ

ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ...

ಬಾದಾಮಿ | ಆಸ್ಪತ್ರೆ, ಶಾಲೆಗೆ ಸಿಇಒ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ನೋಟಿಸ್

ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...