ಉಡುಪಿ | ಕಡಿಯಾಳಿಯ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ, ಮೂರ್ಛೆಹೋಗಿ ಸಿಕ್ಕಿಬಿದ್ದ ಕಳ್ಳರು !

Date:

ಉಡುಪಿ ನಗರದ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ‌ ಹೆಬ್ಬಾಗಿಲಿನ‌ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ. ಕಳ್ಳರ ಕೃತ್ಯಗಮನಿಸಿದ‌ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ತಕ್ಷಣ ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ. ಸಿಸಿ ಟಿವಿ ಪರಿಶೀಲಿಸಿದಾಗ ಇರ್ವರು ಕಳ್ಳರು ಬಂದಿರುವುದು, ಪಲಾಯನದ ಹಾದಿ ತಿಳಿದುಬಂದಿದೆ. ತಕ್ಷಣ ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ‌ ಇರ್ವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಕಳ್ಳರು ಓಡುತ್ತ ಸಾಗುವಾಗ ಓರ್ವ ಕಳ್ಳನಿಗೆ ಮೂರ್ಛೆ ಬಂದು ಧರೆಗುಳಿದಿದ್ದಾನೆ. ಮೂರ್ಛೆಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು‌, ಓಡಲು ಯತ್ನಿಸಿದರೂ ಸಿಗುವಂತಾಯಿತು. ಮೂರ್ಛೆ ವ್ಯಾಧಿ ಉಲ್ಭಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ‌ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛೆಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ಮತ್ತಷ್ಟೇ ತಿಳಿದುಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...