ಉಡುಪಿಯ ಕಲ್ಯಾಣಪುರ ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮೃತದೇಹ ಇರಿಸಲಾಗಿದೆ.
ವರದಿಯಲ್ಲಿರುವ ವ್ಯಕ್ತಿಯ ಪತ್ತೆ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಉಡುಪಿ ನಗರ ಠಾಣೆಗೆ ಮಾಹಿತಿ ನೀಡಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಕಲ್ಯಾಣಪುರ ಸ್ವರ್ಣ ನದಿಯಲ್ಲಿ ತೇಲಿ ಬರುತ್ತಿದ್ದ ಗಂಡಸಿನ ಶವವನ್ನು ಮಾಜಿ ನಗರಸಭೆ ಸದಸ್ಯ ಚಿನ್ಮಯಮೂರ್ತಿ ಮತ್ತು ಅವರ ತಂಡವು ದಡಕ್ಕೆ ಸೇರಿಸಿ, ವಿಷಯವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕ, ವಾರಸುದಾರರಿಗೆ ಸೂಚನೆ
ಒಳಕಾಡುವರು ಮೃತದೇಹವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದ್ದಾರೆ. ಹಾಗೆಯೇ ನಗರ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಮೃತ ವ್ಯಕ್ತಿಗೆ ಮುಖದಲ್ಲಿ ಗಡ್ಡವಿದ್ದು, 45 ವರ್ಷ ಪ್ರಾಯವೆಂದು ಅಂದಾಜಿಸಲಾಗಿದೆ. ವಾರಸುದಾರರು ನಗರ ಪೋಲಿಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
