ಉಡುಪಿ | ಕಲ್ಸಂಕ ಜಂಕ್ಷನ್‌ನಲ್ಲಿ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಯುವಕ !

Date:

ಉಡುಪಿ ನಗರದ ಕಲ್ಸಂಕ ಸಿಗ್ನಲ್‌ ಬಳಿ ಭಾನುವಾರ ಸಂಜೆ ಆತಂಕಕಾರಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಘಟನೆ ವರದಿಯಾಗಿದೆ.

- Advertisement -

ಗಾಯಗೊಂಡ ಯುವಕನನ್ನು ಶರಣಪ್ಪ ಬಸಪ್ಪನವರ್‌ (34), ತಂದೆ ಫಕೀರಪ್ಪ, ವಾಸ: ಮನೆ ನಂ.20, ಬೆಂತೂರ್‌, ಸರಕಾರಿ ಪ್ರಾಥಮಿಕ ಶಾಲೆ ಬಡಪ್ಪನವರ್‌, ಗದಗ ತಾಲ್ಲೂಕು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಂಜೆ 6.15ರ ಸುಮಾರಿಗೆ ಕಲ್ಸಂಕ ಜಂಕ್ಷನ್‌ ಬಳಿ ಶರಣಪ್ಪ ತನ್ನ ಮೇಲೆ ಯಾರೋ ಹಲ್ಲೆ ನಡೆಸಿದ್ದಾರೆಂದು ಹೇಳುತ್ತಾ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಪರಿಣಾಮವಾಗಿ ಅವನ ಕಾಲಿಗೆ ಗಂಭೀರ ಗಾಯಗಳಾಗಿವೆ.

ಘಟನೆಯ ಸಮಯದಲ್ಲಿ ಕಲ್ಸಂಕ ಜಂಕ್ಷನ್‌ನಲ್ಲಿ ಸಂಚಾರ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಶ್ರೀ ಲಿಂಗರಾಜು ಅವರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಪೆಟ್ರೋಲ್‌ ಬಾಟಲಿಯನ್ನು ಯುವಕನಿಂದ ದೂರ ಮಾಡಿ ಹೆಚ್ಚಿನ ಅನಾಹುತವಾಗುವುದನ್ನು ತಡೆದರು. ಉಡುಪಿ ನಗರ ಠಾಣಾ ಪೊಲೀಸರು ಹಾಗೂ ನಿತ್ಯಾನಂದ ಒಳಕಾಡುರವರು ಕೂಡ ಸಹಾಯಕರಾಗಿ ಕಾರ್ಯನಿರ್ವಹಿಸಿ ಯುವಕನನ್ನು ರಕ್ಷಿಸಿದರು.

ಸ್ಥಳೀಯರ ಸಹಕಾರದಿಂದ ಗಾಯಗೊಂಡ ಯುವಕನನ್ನು ತಕ್ಷಣ ಅಜ್ಜರಕಾಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಸ್ತುತ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಯುವಕ ಮಾನಸಿಕವಾಗಿ ಅಸ್ವಸ್ಥನಾಗಿದ್ದು, “ತನ್ನ ಊರಿಗೆ ಹೋಗುತ್ತೇನೆ” ಎಂದು ಹೇಳುತ್ತಾ ಗಲಾಟೆ ಮಾಡುತ್ತಿದ್ದನೆಂದು ತಿಳಿದುಬಂದಿದೆ. ನಾಲ್ಕು ದಿನಗಳ ಹಿಂದೆ ಪತ್ನಿ ಭಾಗ್ಯ ಅವರೊಂದಿಗೆ ಗದಗ ಜಿಲ್ಲೆಯಿಂದ ಉಡುಪಿಗೆ ಬಂದಿದ್ದ ಆತ, ಮಹಾಂತೇಶ ಎಂಬವರೊಂದಿಗೆ ಕೂಲಿ ಕೆಲಸ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ತನ್ನ ಊರಿನಲ್ಲಿ ಕುಟುಂಬ ಸದಸ್ಯರೊಂದಿಗೆ ಗಲಾಟೆ ಮಾಡಿಕೊಂಡ ಹಿನ್ನೆಲೆ ಮನಸ್ಥಿತಿ ಕಳೆದುಕೊಂಡು ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...