ಕಾಪು ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ಮಗಳನ್ನು ಅಪಹರಣಗೈದಿದ್ದ ನಾಲ್ವರ ಬಂಧನ

Date:

ಉಡುಪಿಯ ಕಾಪು ತಾಲೂಕಿನ ಸಮಾಜ ಸೇವಕ ಲೀಲಾಧರ ಶೆಟ್ಟಿ ಆತ್ಮಹತ್ಯೆ ಪ್ರಕರಣ ಹಾಗೂ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಮಗಳ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20) ಮತ್ತು ನಾಪತ್ತೆಯಾಗಲು ಸಹಕರಿಸಿದ ಆರೋಪದ ಮೇಲೆ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಕಾಪುವಿನ ಮಜೂರು ನಿವಾಸಿ ಮೊಹಮ್ಮದ್ ಅಝೀಜ್ ಎಂದು ಗುರುತಿಸಲಾಗಿದೆ.

ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದ್ದರು. ಆಕೆ ಕಳೆದ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ್ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯ ಮಲಗುವ ಕೋಣೆಯಲ್ಲಿ ಕಳೆದ ಡಿ.13ರಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು.

ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ

ನಾಪತ್ತೆ ಪ್ರಕರಣವನ್ನು ಭೇದಿಸಲು ಪೊಲೀಸರು ತಂಡಗಳನ್ನು ರಚಿಸಿದ್ದು, ಅದರಂತೆ ಸಾಕು ಮಗಳನ್ನು ಪತ್ತೆ ಹಚ್ಚುವುದರೊಂದಿಗೆ ಹಾಗೂ ಆಕೆಯ ಗೆಳೆಯ ಗಿರೀಶ್ ಮತ್ತು ಆತನ ಇತರ ಮೂವರ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆ ನಡೆಸಲು ಆಸ್ಪತ್ರೆಗೆ ದಾಖಲಿಸಲಾಗಿದ್ದು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಹೆಚ್ಚುವರಿ ಎಸ್‌ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಗಾಂಧಿ ಜಯಂತಿ ಆಚರಣೆ

ಭಾರತಕ್ಕೆ ಸ್ವಾತಂತ್ರ್ಯಕ್ಕೆ ತಂದುಕೊಟ್ಟ ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳು ಇಂದಿಗೂ...

ಮಂಡ್ಯ | ಬೀದಿ ನಾಯಿಗಳ ದಾಳಿಗೆ ಬಡರೈತನ ಮೇಕೆಗಳು ಬಲಿ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಬೀದಿ...

ಬೀದರ್ | ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ; ಮೂಲಸೌಕರ್ಯ ಒದಗಿಸಲು ಅಲೆಮಾರಿಗಳ ಆಗ್ರಹ

ಅಲೆಮಾರಿ ಸಮುದಾಯದ ವಸತಿ ವಂಚಿತ ಕುಟುಂಬಗಳಿಗೆ ನಿವೇಶನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು...

ಮೈಸೂರು | ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆರು ಮಂದಿ ಗಣ್ಯ ಸಾಧಕರು ಆಯ್ಕೆ

ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಅದಮ್ಯ ರಂಗಶಾಲೆ ಜಂಟಿಯಾಗಿ ಕೊಡಮಾಡುವ 'ನಾಡಪ್ರಭು...