ಇತ್ತೀಚೆಗೆ ಬ್ರಹ್ಮಾವರ ಸಮೀಪದ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆಯಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು.ಇದೀಗ ಕಾರ್ಕಳ ತಾಲೂಕಿನಲ್ಲೂ ಇಂತಹದ್ದೇ ಪ್ರಕರಣ ಪುನರಾವರ್ತನೆ ಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ಎಂಬಲ್ಲಿ ಹಸುವಿನ ದೇಹದ ಭಾಗಗಳು ಪತ್ತೆಯಾಗಿವೆ.
ಇವು ಇಲ್ಲಿನ ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಕಾರ್ಕಳ ತಾಲೂಕಿನ ಮಲೆಬೆಟ್ಟು, ದುರ್ಗಾ ಗ್ರಾಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಭೇಟಿ ನೀಡಿದರು. ಜೊತೆಗೆ ಕಾರ್ಕಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದರ ಬೆನ್ನಲ್ಲೇ ಈ ಭಾಗದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸ್ಥಳೀಯರು, ಹಿಂದುಪರ ಸಂಘಟನೆ ಕಾರ್ಯಕರ್ತರಿಂದ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
