ಉಡುಪಿ | 15 ದಿನಗಳ ಒಳಗಾಗಿ ಕನ್ನಡ ಭಾಷೆಯ ನಾಮಫಲಕ ಹಾಕದಿದ್ದಲ್ಲಿ ಹೋರಾಟ – ಪ್ರಭಾಕರ ಪೂಜಾರಿ

Date:

ಅಂಗಡಿ ಶೋ ರೂಮ್‌ ಗಳು ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಲು ಸರಕಾರವು ಈಗಾಗಲೇ ಆದೇಶ ನೀಡಿದೆ.

- Advertisement -

ರಾಜ್ಯ ಸರಕಾರವು ಕನ್ನಡ ಭಾಷೆ ಅಳವಡಿಸಲು ಆದೇಶ ಮಾಡಿದರೂ ಸಹ ಅಂಗಡಿ ಶೋ ರೂಮ್‌ಗಳು, ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ನವರು ಇಲ್ಲಿಯವರೆಗೆ ನಾಮಫಲಕವನ್ನು ಅಳವಡಿಸಿರುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಮಾಯವಾಗಿರುತ್ತದೆ, ಒಂದು ವೇಳೆ 15 ದಿನಗಳ ಒಳಗಾಗಿ ಕನ್ನಡ ಭಾಷೆಯ ನಾಮಫಲಕವನ್ನು ಯಾವುದೇ ಅಂಗಡಿ ಶೋ ರೂಮ್‌ಗಳು, ಹೋಟೆಲ್‌ಗಳು ಮತ್ತು ಶಾಲಾ ಕಾಲೇಜ್‌ನವರು ಹಾಗೂ ಇನ್ನಿತರ ಕಚೇರಿಗಳಲ್ಲಿ ಅಳವಡಿಸದಿದ್ದರೆ ಹಾಗೂ ನಿಮ್ಮ ಆದೇಶಕ್ಕೆ ಸ್ಪಂದಿಸಿಲ್ಲವಾದರೆ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮುಂದಿನ ಹೋರಾಟವನ್ನು ಕೈಗೊಳ್ಳುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರಭಾಕರ್ ಪೂಜಾರಿಯವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಅವರು ಇಂದು ಉಡುಪಿಯ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಅನುಷ್ಠಾನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳು, ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನ ಆಗಿಲ್ಲ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ ಪ್ರಸ್ತಾಪ ಮಾಡಿದ್ದೇವೆ. ಉಡುಪಿ ಜಿಲ್ಲೆಯಲ್ಲಿ ನಾಮಫಲಕಗಳಲ್ಲಿ ಶೇ. 60ರಷ್ಟು ಭಾಗ ಕನ್ನಡ ಇರಬೇಕು. ಈ ಬಗ್ಗೆ ಪೌರಾಯುಕ್ತರಿಗೆ ಮನವಿ ಮಾಡಿದ್ದೇವೆ. ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಇರದಿದ್ದರೆ ಅಂತಹವರ ಲೈಸನ್ಸ್ ರದ್ದು ಮಾಡುವ ಭರವಸೆಯನ್ನು ಪೌರಾಯುಕ್ತರು ಕೊಟ್ಟಿದ್ದಾರೆ ಎಂದರು. ನಾಮಫಲಕ ಬದಲಾವಣೆ ಮಾಡಲು 15 ದಿನಗಳ ಗಡುವನ್ನು ಪೌರಾಯುಕ್ತರಿಗೆ ಕೊಟ್ಟಿದ್ದೇವೆ. ಅದರೊಳಗೆ ನಾಮಫಲಕ ಬದಲಾಗದಿದ್ದರೆ ಅಂತಹ ಕಟ್ಟಡ, ವಾಣಿಜ್ಯ ಮಳಿಗೆಗಳ ನಾಮಫಲಕಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ. ಉಗ್ರವಾದ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...