ಉಡುಪಿ | ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

Date:

ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್‌ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ವಾಹನ ಸಂಚರಿಸಲು ವ್ಯವಸ್ಥೆ ಮಾಡಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

- Advertisement -

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರೆ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾಕ್ ನಲ್ಲಿ ಸಾಗಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರ್ಯಾಕ್ ನಲ್ಲಿ ಸಾಗಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್‌ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರಬೇಕು.
ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ ಟ್ರಕ್‌ಗಳು ಮೂಡುಬೆಳ್ಳೆ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳಬೇಕು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್‌ನಲ್ಲಿ ಹೆದ್ದಾರಿ ಪ್ರವೇಶಿಸಿ, ಉಡುಪಿಗೆ ತೆರಳಬೇಕು.

ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸೇರಿ ಉಡುಪಿ ಕಡೆಗೆ ತೆರಳಬೇಕು.

ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳಬೇಕು.

ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ/ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತ್ಯ ನೀಡುವುದು. ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ, ಉಡುಪಿ ರಸ್ತೆ, ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀ. ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...