ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

Date:

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಫಲರಾಗಿದ್ದಾರೆ.

- Advertisement -

ಉಡುಪಿ‌ ಜಿಲ್ಲೆಯ ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿಯ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ ವಿರುದ್ಧ, ಸ್ಥಳೀಯ ಮತದಾರರು ಹಾಗೂ ಸಾರ್ವಜನಿಕರು ಒಟ್ಟುಸೇರಿಕೊಂಡು ಮತದಾನ ಬಹಿಷ್ಕಾರ ಮಾಡುವ ನಿರ್ಧಾರ ಕೈಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ವಿಷಯ ತಿಳಿದ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಇಂದು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿಯ ಮತದಾರರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿ, ಸ್ಥಳೀಯರ ಅಪೇಕ್ಷಿತ ರಸ್ತೆ ಕಾಮಗಾರಿಯ ಬಗ್ಗೆ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಸಚಿವರ ಮಂಜೂರಾತಿ ಕಾಮಗಾರಿ ಪಟ್ಟಿಯಲ್ಲಿ ಈಗಾಗಲೇ ನಮೂದಾಗಿದ್ದು, ಮಂಜೂರಾದ ತಕ್ಷಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮನವೊಲಿಸಿದ್ದಾರೆ.

ಬಳಿಕ ಮತದಾರರು ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನದಲ್ಲಿ ಭಾಗವಹಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಬೆಳ್ಳೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರುಗಳಾದ ಶಿವಾಜಿ ಸುವರ್ಣ ಬೆಳ್ಳಿ ಹಾಗೂ ರಂಜನಿ ಹೆಗ್ಡೆಯವರು ಜಂಟಿ ಹೇಳಿಕೆಯಲ್ಲಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಉಡುಪಿ | SIR ಫಾರಂ–7 ದುರ್ಬಳಕೆ ತಡೆಗೆ ಮುಸ್ಲಿಮ್ ಒಕ್ಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ತೆಗೆದುಹಾಕಲು...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....