ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

Date:

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಬಳಿಗೆ ತೆರಳಿ ಸೇವೆ ನೀಡುವ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ. ಸಾರ್ವಜನಿಕರು ಪ್ರಜಾಸೇವಾ ಆಂದೋಲನ ಸಭೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

- Advertisement -

ಕಾಪು ತಾಲೂಕು ಆಡಳಿತದ ವತಿಯಿಂದ ಕಾಪು ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಗ್ರಾಮೀಣ ಜನರ ಸಮಸ್ಯೆಗಳಿಗೆ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸುತ್ತಿದೆ. ಜನರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಒದಗಿಸುವ ಕಾರ್ಯ ಈ ಸಭೆಗಳ ಮೂಲಕ ನಡೆಯುತ್ತಿದೆ ಎಂದರು.

ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯ ಹಂತದಲ್ಲಿಯೇ ಸಾಧ್ಯವಾದಷ್ಟು ಪರಿಹಾರ ಒದಗಿಸುತ್ತಿದ್ದಾರೆ. ವಿಶೇಷವಾಗಿ ದುರ್ಬಲ ವರ್ಗದವರು, ಹಿರಿಯ ನಾಗರಿಕರು, ಬಡವರು, ಕಾರ್ಮಿಕರು ಹಾಗೂ ಮಹಿಳೆಯರು ಈ ಸಭೆಗಳ ಸದುಪಯೋಗ ಪಡೆಯುವಂತೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಹೇಳಿದರು.

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ 19

ಕರಾವಳಿ ಅಭಿವೃದ್ಧಿಗೆ ಆದ್ಯತೆ

ಕರಾವಳಿ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂಬುದಕ್ಕೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಉತ್ತಮ ಉದಾಹರಣೆಯಾಗಿದೆ. ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಕರಾವಳಿ ಭಾಗದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದೆ ಎಂದರು.

ಕಸ್ತೂರಿರಂಗನ್ ವರದಿಯ ಹೊಸ ಕರಡು ಅಧಿಸೂಚನೆಯಿಂದ ಜನರಲ್ಲಿ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಬ್ರಿಗೆ ಆಗಮಿಸಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ್ದಾರೆ. ಈ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ರಿಜ್ವಾನ್ ಅರ್ಷದ್ ಹೇಳಿದರು.

ಕರಾವಳಿ ಭಾಗದ ಅಭಿವೃದ್ಧಿಯಲ್ಲಿ ಪ್ರವಾಸೋದ್ಯಮ ಪ್ರಮುಖ ಪಾತ್ರ ವಹಿಸಲಿದೆ. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯಿಂದ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ದೊರೆಯಲಿದ್ದು, ಉದ್ಯೋಗಕ್ಕಾಗಿ ದೇಶ-ವಿದೇಶಗಳಿಗೆ ತೆರಳುವ ಪರಿಸ್ಥಿತಿ ಕಡಿಮೆಯಾಗಲಿದೆ. ಜಾತಿ, ಧರ್ಮಗಳ ನಡುವೆ ಸೌಹಾರ್ದತೆ ಬೆಳೆಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ ಕರಾವಳಿ ಪ್ರದೇಶವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸಾಧ್ಯ ಎಂದರು.

21 ದಿನದೊಳಗೆ ಪರಿಹಾರ ನೀಡಿ

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾರ್ವಜನಿಕರ ಹಿತರಕ್ಷಣೆಗಾಗಿ ಸರ್ಕಾರ ಕೈಗೊಂಡಿರುವ ಪ್ರಜಾಸೇವಾ ಆಂದೋಲನವನ್ನು ಯಶಸ್ವಿಯಾಗಿ ಮುಂದುವರಿಸಬೇಕು. ಸರ್ಕಾರ ಮತ್ತು ಸಮಾಜದ ನಡುವೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕೊಂಡಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸಿ ಹಿಂಬರಹ ನೀಡುವುದಕ್ಕೆ ಸೀಮಿತವಾಗಬಾರದು. ಸ್ವೀಕರಿಸಿದ ಅರ್ಜಿಗಳಿಗೆ 21 ದಿನಗಳೊಳಗೆ ಅಧಿಕಾರಿಗಳು ಪರಿಹಾರ ಒದಗಿಸಬೇಕು. ಸ್ಥಳೀಯ ಹಂತದಲ್ಲಿ ಪರಿಹಾರ ಸಾಧ್ಯವಾಗದ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ರಾಜ್ಯದ ಪ್ರತಿಯೊಂದು ಹಳ್ಳಿಯ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಯನ್ನು ಆಲಿಸಿ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಸರ್ಕಾರದ ಸೌಲಭ್ಯಗಳು ಕಚೇರಿಯಲ್ಲೇ ಉಳಿಯದೆ ಅರ್ಹ ಫಲಾನುಭವಿಗಳಿಗೆ ತಲುಪಿಸಲು ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ವಿವಿಧ ಇಲಾಖೆಗಳ ಕೌಂಟರ್‌ಗಳನ್ನು ಸ್ಥಾಪಿಸಿ ಅಹವಾಲು ಸ್ವೀಕರಿಸುವುದರೊಂದಿಗೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದರು.

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಎರಡನೇ ಹಾಗೂ ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಪ್ರತಿ ಬುಧವಾರ ಜಿಲ್ಲಾಧಿಕಾರಿಗಳ ಹಂತದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ವೀಕರಿಸಲಾದ ಅರ್ಜಿಗಳಿಗೆ ಗುಣಮಟ್ಟದ ಪರಿಹಾರ ದೊರೆತಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

75 ಅರ್ಜಿ ಸಲ್ಲಿಕೆ

ಸಭೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು 75 ಅರ್ಜಿಗಳು ಸಲ್ಲಿಕೆಯಾದವು.

ಇದೇ ಸಂದರ್ಭದಲ್ಲಿ ಕೃಷಿ ಮೇಳ–2026ರ ಪೋಸ್ಟರ್ ಬಿಡುಗಡೆ ಮಾಡಲಾಯಿತು. ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಬ್ಯಾಟರಿ ಚಾಲಿತ ವೀಲ್‌ಚೇರ್, ಹೊಲಿಗೆ ಯಂತ್ರ, ಟಾಕಿಂಗ್ ಲ್ಯಾಪ್‌ಟಾಪ್ ಹಾಗೂ ಡಿ. ದೇವರಾಜ ಅರಸು ನಿಗಮದ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಪುರಸಭೆ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕ್ರಮ್ ಕಾಪು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾಪು ತಹಶೀಲ್ದಾರ್ ಅನಂತ ಶಂಕರ್ ಬಿ. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಸಭೆಯ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತೋಟಗಾರಿಕೆ ಇಲಾಖೆ, ವಿ.ಬಿ.ಜಿ. ರಾಮ್‌ಜಿ ಯೋಜನೆ, ಕೃಷಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮಳಿಗೆಗಳನ್ನು ತೆರೆದು ಸರ್ಕಾರದ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...