ಉಡುಪಿ | ಮೂಲಗೇಣಿ ಒಕ್ಕಲು ಸಮಸ್ಯೆ ಇನ್ನೂ ಜೀವಂತ – ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ

Date:

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲಗೇಣಿ ಒಕ್ಕಲುಗಳ ಸಮಸ್ಯೆ ಅತ್ಯಂತ ಐತಿಹಾಸಿಕವಾಗಿದ್ದು ಸ್ವಾತಂತ್ರ್ಯ ದೊರಕಿ ಏಳುವರೆ ದಶಕಗಳ ಅನಂತರವೂ ಜೀವಂತವಾಗಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ಈ ರೀತಿಯ ಶೇೂಷಣೆ ನಿವಾರಿಸುವರೆ ರಾಜ್ಯ ಸರ್ಕಾರ 2011ರಲ್ಲಿ ಮೂಲಗೇಣಿದಾರರಿಗೆ ಭೂಮಿಯ ಸಂಪೂರ್ಣ ಒಡೆತನ ಖಾತ್ರಿ ಪಡಿಸುವ ಕಾಯಿದೆ ನಿರ್ಣಯಿಸಿ ರಾಷ್ಟ್ರಪತಿಗಳ ಅಂಕಿತವನ್ನು ಪಡೆದು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಕೆಲವೊಂದು ಹಿತಾಸಕ್ತಿ ಮೂಲಿದಾರರು ಹೈಕೋರ್ಟ್ ಮೆಟ್ಟಿಲು ಹತ್ತಿದರು. ಇದರ ಪರಿಣಾಮವಾಗಿ ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಮೂಲಗೇಣಿದಾರರ ಬೇಡಿಕೆ ನ್ಯಾಯಯುತವಾಗಿದೆ ಎಂದು ತೀಪು೯ ನೀಡಿತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕಾರಣ ಇದೀಗ ತೀರ್ಪು ಬರುವ ಹಂತದಲ್ಲಿದ್ದು ಈ ನ್ಯಾಯ ಪಡೆಯುವಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಮೂಲಗೇಣಿದಾರರು ಒಟ್ಟಾಗಿ ಧ್ವನಿ ಎತ್ತಿ ಹೇುಾರಾಟ ಮಾಡ ಬೇಕಾದ ಅನಿವಾರ್ಯತೆ ಇದೆ ಎಂದು ಸಂವಿಧಾನ ವಿಶ್ಲೇಷಕ ನಿವೃತ್ತ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಅವರು ಮೂಲಗೇಣಿದಾರರ ಸಮಾವೇಶವನ್ನು ಉದ್ದೇಶಿಸಿ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.

- Advertisement -

ಅವರು ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆಯ ಹೊರಗಿನ ಸಭಾಂಗಣದಲ್ಲಿ ನಡೆದ ಮೂಲ‌ಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ ಕಾರ್ಯಕ್ರಮದಲ್ಲಿ ‌ಮಾತನಾಡಿದರು. ಮಂಗಳೂರು ಮೂಲಗೇಣಿ ಒಕ್ಕಲು ವೇದಿಕೆಯ ಅಧ್ಯಕ್ಷರಾದ ಎಂ.ಕೆ.ಯಶೇೂಧರ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಮೂಲಗೇಣಿ ಹೇೂರಾಟದ ಪ್ರತಿಯೊಂದು ಅನುಭವಗಳನ್ನು ಸಭೆಯ ಮುಂದೆ ಎಳೆ ಎಳೆಯಾಗಿ ಹಂಚಿಕೊಂಡರು. ಸಮಾವೇಶದ ವೇದಿಕೆಯಲ್ಲಿ ಹಿರಿಯ ಪದಾಧಿಕಾರಿಗಳಾದ ಕ್ಯಾಪ್ಟನ್ ಹ್ಯುಗಸ್ ಮಂಗಳೂರು, ಕೇೂಶಾಧಿಕಾರಿ ಶಂಕರ್ ಪ್ರಭು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಂಘಟನಾ ಪ್ರತಿನಿಧಿ ಎಸ್.ಎಸ್.ಶೇಟ್ ಸಭಿಕರನ್ನು ವಂದಿಸಿದರು. ಉಡುಪಿ ಜಿಲ್ಲಾ ಏಳು ತಾಲೂಕಿನ ಮೂಲಗೇಣಿದಾರರು ಸಮಾರಂಭದಲ್ಲಿ ಉಪಸ್ಥಿತರಿದ್ದು ಸಂವಾದ ಕಾರ್ಯಕ್ರಮದಲ್ಲಿ ಭಾವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...