ಉಡುಪಿ | ಅ 16 ರಂದು “ಎದ್ದೇಳು ಕನ್ನಡಿಗ – ಕೆಆರ್‌ಎಸ್ ಪಕ್ಷ ಸೇರು ಬಾ” ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Date:

ರಾಜ್ಯದಲ್ಲಿನ ದುರಾಡಳಿತ, ಭ್ರಷ್ಟಾಚಾರ, ಅನ್ಯಾಯ ಹಾಗೂ ದೌರ್ಜನ್ಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವು ಜನರ ವಿಶ್ವಾಸವನ್ನು ಗಳಿಸುತ್ತಿದ್ದು, ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಾದ್ಯಂತ “ಎದ್ದೇಳು ಕನ್ನಡಿಗ – ಸಮೃದ್ಧ ಕರ್ನಾಟಕ ಕಟ್ಟಲು ಕೆಆರ್‌ಎಸ್ ಪಕ್ಷ ಸೇರು ಬಾ, ಶಕ್ತಿ ಚೈತನ್ಯ ಪಡೆಯಲು” ಎಂಬ ಶೀರ್ಷಿಕೆಯಲ್ಲಿ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನಕ್ಕೆ ಹೆಸರಾಂತ ಕನ್ನಡ ಹೋರಾಟಗಾರ ಸಾ. ರಾ. ಗೋವಿಂದ್ ಅವರು ಕಳೆದ ಅಕ್ಟೋಬರ್ 6ರಂದು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದೇ ಅಭಿಯಾನವನ್ನು ಅಕ್ಟೋಬರ್‌ 16ರಂದು ಕೈಗೊಳ್ಳಲಾಗುವುದು ಎಂದು ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ರಾಜೇಶ್ ಕೆ.ವಿ. ಸಾಸ್ತಾನ ತಿಳಿದ್ದಾರೆ.

- Advertisement -

ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡಲು ಕಾರ್ಯಕ್ರಮ ನಡೆಯಲಿದೆ, ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೆಆರ್‌ಎಸ್ ಪಕ್ಷವು ಸಾಮಾನ್ಯ ಜನರ ಹಿತಾಸಕ್ತಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಪ್ರತಿದಿನ ನೂರಾರು ಜನರು ಪಕ್ಷ ಸೇರುತ್ತಿದ್ದಾರೆ ಹಾಗೂ ದೇಣಿಗೆಯ ಮೂಲಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಜನರ ಪರ ಹೋರಾಡುವ ನಮ್ಮ ಧೋರಣೆಯನ್ನು ವ್ಯವಸ್ಥೆ ಸಹಿಸಲಾಗದೆ, ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಹೆದರಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ ನಾವು ಹಿಂಜರಿಯದೆ ಹೋರಾಟ ಮುಂದುವರಿಸುತ್ತೇವೆ ಎಂದರು.

ರಾಜ್ಯದಲ್ಲಿ ಕೋಟ್ಯಾಂತರ ಜನರು ದುರಾಡಳಿತ ಮತ್ತು ಭ್ರಷ್ಟಾಚಾರದಿಂದ ನರಳುತ್ತಿರುವುದನ್ನು ಉಲ್ಲೇಖಿಸಿದ ಅವರು, ಈ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಕುಸಿದಿರುವ ವ್ಯವಸ್ಥೆಯನ್ನು ಪುನರ್‌ನಿರ್ಮಿಸಲು ಜನರ ಸಹಭಾಗಿತ್ವ ಅತ್ಯಗತ್ಯ. ಆದ್ದರಿಂದ ನಾಡಿನ ಬಗೆಗೆ ಕಾಳಜಿಯುಳ್ಳವರು, ಕನ್ನಡದ ಬಗ್ಗೆ ಬದ್ಧತೆಯುಳ್ಳವರು ಮುಂದೆ ಬಂದು ಕೆಆರ್‌ಎಸ್ ಪಕ್ಷದ ಸದಸ್ಯತ್ವ ಪಡೆಯಬೇಕು, ಎಂದು ಹೇಳಿದರು. ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ 300 ಸದಸ್ಯರಿದ್ದು ಮುಂದಿನ ದಿನಗಳಲ್ಲಿ ಈ ಸದಸ್ಯತ್ವ ಅಭಿಯಾನವನ್ನು ಸಕ್ರಿಯವಾಗಿ ಹಮ್ಮಿಕೊಂಡು 5000 ಸದಸ್ಯರನ್ನು ಮಾಡುವ ಗುರಿಯನ್ನು ಹೊಂದಿದ್ದೇವೆ,ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...