ಉಡುಪಿ | ಮ್ಯಾರಥಾನ್ ವೇಳೆ ಕುಸಿದು ಬಿದ್ದು ಠಾಣಾಧಿಕಾರಿ ನಿಧನ

Date:

ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನಸ್”, “ಡ್ರಗ್ಸ್ ಫ್ರೀ ಕರ್ನಾಟಕ” ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ಓಟದ ವೇಳೆ ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.

- Advertisement -

ಜಿಲ್ಲಾ ಪೊಲೀಸ್ ಇಲಾಖೆಯಿಂದ ಇಂದು ಬೆಳಿಗ್ಗೆ ಆಯೋಜಿಸಲಾಗಿದ್ದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ನಾಸೀರ್ ಹುಸೇನ್ ಅವರು ಜೋಡುಕಟ್ಟೆಯ ಟಿ.ಎಂ.ಎ. ಪೈ ಆಸ್ಪತ್ರೆ ಎದುರು ಏಕಾಏಕಿ ಕುಸಿದು ಬಿದ್ದರು. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.

ನಾಸೀರ್ ಹುಸೇನ್ ಅವರು ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು ಹಾಗೂ ಶಂಕರನಾರಾಯಣ ಠಾಣೆಗಳಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸೇವೆ ಸಲ್ಲಿಸಿದ ಎಲ್ಲ ಠಾಣೆಗಳಲ್ಲಿ ಜನಮೆಚ್ಚುಗೆ ಗಳಿಸಿದ್ದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಪೊಲೀಸ್ ವಲಯದಲ್ಲಿ ದುಃಖದ ಛಾಯೆ ಆವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...