ಉಡುಪಿ | ಕುಂದಾಪುರದಲ್ಲಿ ಬಸ್ಸಿನ ಕೊರತೆ, ವಿದ್ಯಾರ್ಥಿಗಳ ಪರದಾಟ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಬಸ್ಸಿನ ಕೊರತೆಯಿಂದ ಪರದಾಡುತ್ತಿರುವ ಘಟನೆಗಳು ಕಂಡುಬರುತ್ತಿವೆ. ಕಳೆದ ಕೆಲವು ದಿನಗಳಿಂದ ಪೊಲೀಸ್ ಇಲಾಖೆ ನಿಗದಿತ ಸಂಖ್ಯೆಯಿಗಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಸಿಕೊಂಡು ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳಿಗೆ ಪೆನಾಲ್ಟಿ ವಿಧಿಸುತ್ತಿದ್ದು, ಪ್ರಯಾಣಿಕರನ್ನು ಮಧ್ಯದಲ್ಲೇ ಇಳಿಸುತ್ತಿರುವುದು ವಿದ್ಯಾರ್ಥಿಗಳಿಗೆ ದೊಡ್ಡ ತೊಂದರೆಯಾಗಿದೆ.

- Advertisement -

ಬೆಳಿಗ್ಗೆ ಸಮಯಕ್ಕೆ ಸರಿಯಾಗಿ ಕಾಲೇಜು ತಲುಪಬೇಕಾದ ವಿದ್ಯಾರ್ಥಿಗಳು ಬಸ್ ಸಿಗದೆ ನಡೆದು, ಅಥವಾ ಆಟೋಗಳಲ್ಲಿ ಅತಿ ಹೆಚ್ಚು ಹಣ ನೀಡಿ ಪ್ರಯಾಣಿಸುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಹಿನ್ನೆಲೆ ಜನವಾದಿ ಮಹಿಳಾ ಸಂಘಟನೆ (JMS) ಕುಂದಾಪುರ ಮತ್ತು ಬೈಂದೂರು ತಾಲೂಕು ಸಮಿತಿಗಳು ಜಿಲ್ಲಾ ಆಡಳಿತದ ಗಮನಕ್ಕೆ ಈ ವಿಷಯವನ್ನು ತಂದು, ತಕ್ಷಣ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿವೆ. ಅಗತ್ಯವಿರುವ ಎಲ್ಲಾ ಗ್ರಾಮಾಂತರ ಮಾರ್ಗಗಳಲ್ಲಿ ಕೆಎಸ್ಆರ್ಟಿಸಿ ಬಸ್‌ಗಳನ್ನು ಓಡಿಸಲು JMS ಸಂಘಟನೆಯ ಆಗ್ರಹಿಸಿದೆ.

ಈಗಾಗಲೇ ಅನೇಕ ಗ್ರಾಮಾಂತರ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್‌ಗಳ ಅಗತ್ಯವಿದೆ. ಆದರೆ ಖಾಸಗಿ ಬಸ್ ಮಾಲೀಕರು ಆ ಮಾರ್ಗಗಳಲ್ಲಿ ಸರ್ಕಾರಿ ಬಸ್‌ಗಳು ಸಂಚರಿಸದಂತೆ ತಡೆಆಜ್ಞೆ ತರುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣಿಸುವ ಹಕ್ಕು ಗ್ರಾಮಾಂತರ ಪ್ರದೇಶಗಳಲ್ಲಿಯೂ ಸಿಗಬೇಕಾದ್ದರಿಂದ, ಎಲ್ಲರಿಗೂ ಈ ಸೌಲಭ್ಯ ದೊರೆಯುವಂತೆ JMS ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳು ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಂಡಿವೆ ಎಂದು ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...