ಉಡುಪಿ | ಕಾರ್ಮಿಕ ಸಂಹಿತೆಗಳ ಅಧಿಸೂಚನೆ, ಜಿಲ್ಲೆಯಾದ್ಯಂತ ಪ್ರತಿಭಟನೆ

Date:

ಇಪ್ಪತ್ತೈದು ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿ ಹೊಸ ಕಾರ್ಮಿಕ ಸಂಹಿತೆ ವಿರೋಧಿಸಿದರೂ ಕೇಂದ್ರ ಸರಕಾರವು ತನ್ನ ಪಕ್ಷದ ಬೆಳೆವಣಿಗೆಗೆ ದೇಶದ ಬಂಡವಾಳಗಾರರಿಂದ ಲಾಭ ಪಡೆಯಲು ಬಂಡವಾಳಗಾರರ ಪರವಾದ ನೂತನ ಕಾರ್ಮಿಕ ಸಂಹಿತೆ ಅಧಿಸೂಚನೆ ಹೊರಡಿಸಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

- Advertisement -

ಅವರು ಸಾಲಿಗ್ರಾಮದಲ್ಲಿ ನಡೆದ ಕಟ್ಟಡ ಕಾರ್ಮಿಕರ ಸಭೆಯಲ್ಲಿ ನೂತನ ಕಾರ್ಮಿಕ ಸಂಹಿತೆ ದಹಿಸಿ ಮಾತನಾಡಿದರು. ಹೊಸ ಕಾರ್ಮಿಕ ಸಂಹಿತೆ ಕಾರ್ಮಿಕರು ಅನ್ಯಾಯಕ್ಕೊಳಗಾದಾಗ ನಡೆಸುವ ಮುಷ್ಕರ ದೇಶದ್ರೋಹ ಆಗುತ್ತದೆ.
ಮಾಲಿಕರು ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಲು ನಿರಾಕರಿಸಿದಾಗ ಲೇಬರ್ ಇನ್ಸ್ಪೆಕ್ಟರ್ ಮಾಡುವ ತಪಾಸಣೆ ನಿರ್ಬಂಧಿಸುತ್ತದೆ ಅಥವಾ ಸ್ಪೇಷಲಿಟೇಟರ್ ಆಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2025 11 23 at 8.02.35 PM

ಕಾರ್ಮಿಕ ಇಲಾಖೆ ಕಾರ್ಮಿಕರ ರಕ್ಷಣೆಗೆ ಬದಲಾಗಿ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ ಮಾಲಿಕರ ಏಜೆಂಟ್ ಆಗಿ ಕೆಲಸ ಮಾಡಲು ಸೀಮಿತಗೊಳ್ಳುವ ಅಪಾಯಕಾರಿ ಅಂಶಗಳು ಶ್ರಮಶಕ್ತಿ ನೀತಿ -2025 ರಲ್ಲಿ ಅಡಕವಾಗಿದೆ ಆದರೆ ಕೇಂದ್ರ ಸರ್ಕಾರ ಇವುಗಳನ್ನು ಮರೆಮಾಚಿ ಜನರನ್ನು ಮರಳುಗೊಳಿಸುವ ಪ್ರಕಟಣೆ ಮಾಡುತ್ತಿದೆ.

ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಹೊಸ ಸಂಹಿತೆ ರಾಜ್ಯ ಸರ್ಕಾರ ಜಾರಿ ಮಾಡಬಾರದು ಎಂದು ಅವರು ಹೇಳಿದರು. ಹೊಸ ಸಂಹಿತೆಯು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮೇಲೆ ದುಷ್ಪರಿಣಾಮ ಬೀರುತ್ತದೆ ಮಂಡಳಿ ರದ್ದಾಗುತ್ತದೆ ಈ ಸಂಹಿತೆ ವಾಪಾಸ್ಸು ಪಡೆಯಬೇಕು ಎಂದು ಅವರು ಆಗ್ರಹಿಸಿದರು.

WhatsApp Image 2025 11 23 at 8.02.45 PM

ಪ್ರತಿಭಟನೆಯು ಉಡುಪಿ ತಾಲೂಕು ಸಾಲಿಗ್ರಾಮ, ಕುಂದಾಪುರ ತಾಲೂಕು ಹಾಲಾಡಿ, ಗಂಗೊಳ್ಳಿ, ಆಲೂರು ಗ್ರಾಮಗಳಲ್ಲಿ ಕಾರ್ಮಿಕರು ಕೇಂದ್ರ ಸರ್ಕಾರದ ಜಾರಿ ಮಾಡಿದ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಗೌರವಾಧ್ಯಕ್ಷರಾದ ಚಿಕ್ಕ ಮೊಗವೀರ ಗಂಗೊಳ್ಳಿ, ಶಶಿಕಾಂತ್, ರಘುರಾಮ ನಾಯ್ಕ್,ಅನಂತ ಕುಲಾಲ್, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರಾದ ರಾಮ ಕಾರ್ಕಡ, ಸಾಲಿಗ್ರಾಮ ಕ್ರಷ್ಣ, ನಾಗರಾಜ್, ಶಾರದಾ ಇದ್ದರು. ಉಡುಪಿ ಜಿಲ್ಲೆಯಲ್ಲಿ 5 ಪ್ರದೇಶಗಳಲ್ಲಿ 217 ಮಂದಿ ಭಾಗವಹಿಸಿದ್ದರು.

WhatsApp Image 2025 11 23 at 8.02.46 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...