ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆಹೋದ ಉಡುಪಿ ವಕೀಲರ ಸಂಘ!

Date:

ಉಡುಪಿಯ ವಕೀಲರ ಸಂಘವು ಸಂಘದ ಉದ್ಧಾರಕ್ಕಾಗಿ ಹಾಗೂ ದುಷ್ಟ ಶಕ್ತಿಗಳ ನಿವಾರಣೆಗೆ ‘ಗಣಹೋಮ’ದ ಮೊರೆ ಹೋಗಿದ್ದಾರೆ. ಇದು ಈಗ ಚರ್ಚೆಗೆ ಗ್ರಾಸವಾಗಿದೆ.

- Advertisement -

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್ ಅವರ ಹೆಸರಿನಲ್ಲಿ ಪೋಸ್ಟ್ ಒಂದನ್ನು ಹಂಚಲಾಗುತ್ತಿದ್ದು, ಫೆ.10ರ ಸೋಮವಾರ ಬೆಳಗ್ಗೆ 8ಕ್ಕೆ ಸ್ಥಳಾಂತರಗೊಂಡಿರುವ ವಕೀಲರ ಸಂಘದಲ್ಲಿ ಗಣಹೋಮ ಹಮ್ಮಿಕೊಂಡಿರುವುದಾಗಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ವೈರಲ್ ಆಗಿರುವ ಪೋಸ್ಟರ್‌ನಲ್ಲಿ, “ಉಡುಪಿ ನ್ಯಾಯಾಲಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡ ವಕೀಲರ ಸಂಘದಲ್ಲಿ ಸದಸ್ಯರ ಶ್ರೇಯೋಭಿವೃದ್ಧಿಗಾಗಿ ಹಾಗೂ ತಮ್ಮ ಸ್ವಾರ್ಥ ಸಾಧನೆಗಾಗಿ ವಿನಾಕಾರಣ ಸುಳ್ಳು ಆರೋಪ ಹೊರಿಸಿ ಕಿರುಕುಳ ನೀಡುತ್ತಾ ಸಂಘಕ್ಕೆ ಅಹಿತ ಬಯಸುವ ಸಮಸ್ತ ದುಷ್ಟ ಶಕ್ತಿಗಳ ನಿವಾರಣೆಗಾಗಿ ದಿನಾಂಕ 10.2.2025ನೇ ಸೋಮವಾರ ಬೆಳಗ್ಗೆ 8ಕ್ಕೆ ಸರಿಯಾಗಿ ಸ್ಥಳಾಂತರಿತ ವಕೀಲರ ಸಂಘದಲ್ಲಿ “ಗಣಹೋಮ” ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಸದಸ್ಯರು ಪಾಲ್ಗೊಂಡು ವಿಘ್ನೇಶ್ವರನ ಕೃಪೆಗೆ ಪಾತ್ರರಾಗಬೇಕಾಗಿ ಕೋರುತ್ತಿದ್ದೇವೆ” ಎಂದು ಉಲ್ಲೇಖಿಸಲಾಗಿದೆ.

1003366822
ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೋಸ್ಟರ್

ಕಾನೂನಿನ ಶಿಕ್ಷಣ ಪಡೆದು, ಮೌಢ್ಯತೆ ದೂರ ಮಾಡಬೇಕಾದ ವಕೀಲರೇ, ‘ತಮ್ಮ ಸಂಘದ ವಿರುದ್ಧದ ದುಷ್ಟ ಶಕ್ತಿಯನ್ನು ನಿವಾರಿಸುವ ಉದ್ದೇಶಕ್ಕಾಗಿ’ ಎಂದು ಉಲ್ಲೇಖಿಸಿ ಗಣಹೋಮ ಹಮ್ಮಿಕೊಂಡಿರುವುದು ಈಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಇದನ್ನು ಪ್ರಶ್ನಿಸುತ್ತಿದ್ದಾರೆ.

ವಕೀಲರ ಸಂಘಕ್ಕೆ ಅಹಿತ ಬಯಸುತ್ತಿರುವ ದುಷ್ಟ ಶಕ್ತಿಗಳು ಯಾರು? ಆ ದುಷ್ಟ ಶಕ್ತಿಗಳು ಸಂಘಕ್ಕೆ ಏನು ಮಾಡಿದೆ ಎಂಬುದನ್ನು ಉಡುಪಿ ವಕೀಲರ ಸಂಘವೇ ಉತ್ತರಿಸಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...