ವಕೀಲರ ಸಂಘದ ಸದಸ್ಯ, ರಾಜನ್ ಕುಮಾರ್ ಮೇಲೆ ಡಿಸೆಂಬರ್ 11ರಂದು ಹಲ್ಲೆ ನಡೆದಿತ್ತು. ಈ ಹಲ್ಲೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ವಕೀಲರ ಸಂಘದ ವತಿಯಿಂದ ಇಂದು ಮನವಿ ಸಲ್ಲಿಸಲಾಯಿತು.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್ಪಿ ಡಾ.ಅರುಣ್ ಕುಮಾರ್, ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್, ನ್ಯಾಯವಾದಿಗಳಾದ ವಿಜಯ್ ಕುಮಾರ್ ಶೆಟ್ಟಿ, ಆರೂರು ಸುಖೇಶ್ ಶೆಟ್ಟಿ, ಆನಂದ ಮಡಿವಾಳ, ರಾಜೇಶ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್, ಗಂಗಾಧರ್ ಎಚ್ .ಎಂ, ಮುರಳಿ ಮತ್ತಿತರರು ಉಪಸ್ಥಿತರಿದ್ದರು.
