ಉಡುಪಿ | ಪೆನ್ಶನ್ ಹಣ ಬಿಡುಗಡೆಗೊಳಿಸಲು ಲಂಚ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Date:

ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ.

- Advertisement -

ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪೆನ್ಶನ್ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು ರೂ. 5000 ಲಂಚ ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಹಿತೇಂದ್ರ ಭಂಡಾರಿಯವರ ದೂರಿನಂತೆ ಶನಿವಾರು ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಅವರ ತಂಡ ಹಾಗೂ ಮಂಗಳೂರು ಲೋಕಾಯುಕ್ತ ಪಿಐ ಪಿ ಸುರೇಶ್ ಹಾಗೂ ಕೆ ಎನ್ ಚಂದ್ರ ಶೇಖರ್ ಅವರನ್ನೊಳಗೊಂಡ ತಂಡ ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆಯ ಉಪನಿರ್ದೇಶಕರಾದ ರವಿಕುಮಾರ್ ಮತ್ತು ಸಹಾಯಕ ರಾಘವೇಂದ್ರ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಅಪ್ರಾಪ್ತ ಬಾಲಕಿಯನ್ನು ಚುಡಾಯಿಸಿದ್ದ ಐವರು ಆರೋಪಿಗಳ ಬಂಧನ

ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬಂದಿಗಳಾದ ನಾಗರಾಜ, ಸತೀಶ್, ಪ್ರಸನ್ನ, ರಮೇಶ್, ಸೂರಜ್, ಸುಧೀರ್, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...