ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ
ತೋರಿದ ಅರೋಪವು ಕೇಳಿ ಬಂದಿದ್ದು, ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೇ ವಿನಾಃ ಕಾರಣ ವಿಳಂಬವಾಗುತ್ತಿದ್ದು, ಇದು “ಲೋಕಾಯುಕ್ತ ಕಾಯ್ದೆಯಡಿ ದುರಾಡಳಿತ” ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಜಿಲ್ಲಾ ವ್ಯಾಪ್ತಿಯ ಸಹಾಯಕ ಕಮೀಷನರ್ ಮತ್ತು ಎಲ್ಲಾ ತಾಲೂಕುಗಳ ತಹಶೀಲ್ದಾರರ ಮೇಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯಲ್ಲಿ ವಿಚಾರಣೆಯಲ್ಲಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ | ಸರಕಾರದ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆ : ದೂರು ದಾಖಲು
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: