ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ.
ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ. ಅಕ್ಟೋಬರ್ 8ರಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಗಾಂಧಿ ಜಂಯತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಾಧನ ಜಿ ಆಶ್ರೀತ್ ಅವರು ಫ್ಯಾಷನ್ ಡಿಸೈನರ್ ಆಗಿದ್ದು, ಧಾರಾವಾಹಿ, ಚಲನಚಿತ್ರ ಸೇರಿದಂತೆ ನಾನಾ ಕಾರ್ಯಕ್ರಮಗಳಿಗೆ ವಸ್ತ್ರ ವಿನ್ಯಾಸ ಮಾಡುವ ವೃತ್ತಿಯಲ್ಲಿ ತೊಡಗಿದ್ದಾರೆ. ಅಲ್ಲದೆ, ಮಹಿಳೆ ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ನಡೆಸಿದ್ದಾರೆ.ನಾಡು, ನುಡಿ, ಸಂಸ್ಕೃತಿ, ಕಲೆ, ಶಿಕ್ಷಣ ಹಾಗೂ ಸಮಾಜ ಕ್ಷೇತ್ರದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಅವರಿಗೆ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಶ್ರೀನಿಧಿ ಫೌಂಡೇಶನ್ ಗೌರವಾಧ್ಯಕ್ಷ ಡಾ ಮಂಜುನಾಥ ಎನ್. ಶಿವಣ್ಣನವರ್ ತಿಳಿಸಿದ್ದಾರೆ.