ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

Date:

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್ ಠಾಣಾಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಧಿಸಿದಂತೆ ಇಂದು ವಶಕ್ಕೆ ಪಡೆದುಕೊಂಡ ಬ್ರಹ್ಮಾವರ ಪೋಲೀಸರು ಠಾಣೆಗೆ ಕರೆತರುತ್ತಿರುವಾಗ ಮಹೆಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಈ ಬಗ್ಗೆ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಲಾಗಿದೆ.

- Advertisement -

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿತನಾದ ಮಹೇಶ್ ಶೆಟ್ಟಿ ತಿಮ್ಮರೋಡಿ ರವರನ್ನು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಬಳಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ಗುದ್ದಿ ಆರೋಪಿತರನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದೆ. ಸದ್ರಿ ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಮೂರವನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನ ವಿದಿಸಿರುತ್ತದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿ KA70M3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...