ಉಡುಪಿ | ವರಾಂಡದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

Date:

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.

ಬಿಹಾರ ಮೂಲದ ಕಾರ್ಮಿಕ ಸುರೇಂದ್ರ (55) ಗಾಯಗೊಂಡ ವ್ಯಕ್ತಿ. ಇವರು ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಎಂದು ತಿಳಿದುಬಂದಿದೆ.

ಇವರು ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ವರಾಂಡದಲ್ಲಿ ಭಾನುವಾರ ರಾತ್ರಿ ಮಲಗಿದ್ದಾಗ ಈ ಘಟನೆ ನಡೆದಿದೆ. ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ್ದು, ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದೆ. ಸದ್ಯ ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ ನಾಯಿಗಳೆರಡನ್ನೂ ತಿಂದು ಹಾಕಿದೆ.

ಕಳೆದ ನವೆಂಬರ್‌ನಲ್ಲಿ ಇದೇ ಪರಿಸರದ ಕಲ್ಲೊಟ್ಟು ದೇವಣ್ಣ ನಾಯಕ್‌ ಎಂಬುವವರ ಮನೆಯ ಸಾಕು ನಾಯಿಯನ್ನು ಚಿರತೆ ಬೇಟೆಯಾಡಿ ಅರ್ಧ ತಿಂದು ಉಳಿದರ್ಧ ದೇಹವನ್ನು ಮಲ್ಲಿಗೆ ಗಿಡದ ತೋಟದ ಬಳಿ ಬಿಟ್ಟು, ಪರಾರಿಯಾಗಿತ್ತು.

“ಕಳೆದ ವರ್ಷ ಚಿರತೆಯೊಂದು ಪದವು ಮುಟ್ಲುಪಾಡಿ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದರೆಂದು ನಂಬಲಾದ ವೀಡಿಯೋವೊಂದು ವೈರಲ್‌ ಆಗಿತ್ತು. ಆ ಸಮಯ ಅರಣ್ಯ ಇಲಾಖೆಯವರು ಅಗೋಳಿಬೈಲು ಸಮೀಪ ದರ್ಕಾಸು ಬಳಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಈ ರಸ್ತೆಯಲ್ಲಿ ನಿತ್ಯವೂ ಶಿರ್ವದ ವಿವಿಧ ಶಾಲಾ ಕಾಲೇಜುಗಳಿಗೆ ಕಾಲ್ನಡಿಗೆಯಲ್ಲಿ ಹೋಗುವ ವಿದ್ಯಾರ್ಥಿಗಳು, ವಿವಿಧ ಸ್ಥಳಗಳಿಗೆ ಕೆಲಸಕ್ಕೆ ಹೋಗುವ ಸ್ಥಳೀಯರು, ವಾಹನ ಸವಾರರು ಭಯಭೀತರಾಗಿದ್ದು, ಗ್ರಾ.ಪಂ. ಆಡಳಿತ ಮತ್ತು ಅರಣ್ಯ ಇಲಾಖೆ ಈ ಸಮಸ್ಯೆಗೆ ತುರ್ತು ಪರಿಹಾರ ಒದಗಿಸಬೇಕು” ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಪರಿಹಾರ ನೀಡಲು ಪ್ರಯತ್ನ : ಘಟನೆ ನಡೆದ ಕಲ್ಲೊಟ್ಟು ಪರಿಸರದಲ್ಲಿ ಬೋನು ಇಡಲು ಅರಣ್ಯ ರಕ್ಷಕರಿಗೆ ಸೂಚಿಸಲಾಗಿದೆ. ಗಾಯಾಳುವನ್ನು ಭೇಟಿ ಮಾಡಿ, ದಾಳಿ ನಡೆಸಿದ್ದು ಚಿರತೆಯೇ ಆಗಿದ್ದರೆ, ಮಹಜರು ನಡೆಸಿ ಸರಕಾರದಿಂದ ಗರಿಷ್ಟ ಪರಿಹಾರ ನೀಡಲು ಪ್ರಯತ್ನಿಸಲಾಗುವುದು ಎಂದು ಪಡುಬಿದ್ರಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಜೀವನ್‌ ದಾಸ್‌ ಶೆಟ್ಟಿ ಭರವಸೆ ನೀಡಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ಡಿವಿಪಿ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ...

ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ...

ದಾವಣಗೆರೆ | ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌; ಸ್ಥಳಾಂತರಗೊಂಡವರ ಬದುಕು ದುಸ್ತರ

ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌ಗಾಗಿ ನಮ್ಮ ಮನೆಗಳನ್ನು ವಶಪಡಿಸಿಕೊಂಡು, ನಮ್ಮನ್ನು ಒಕ್ಕಲೆಬ್ಬಿಸಿದರು....

ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ ‘ರೆಮಲ್ ಚಂಡ‌ಮಾರುತ’; ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ...