ಉಡುಪಿ | ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಡಹಗಲೇ ವ್ಯಕ್ತಿಗೆ ಚೂರಿ ಇರಿದು ಹತ್ಯೆ

Date:

Advertisements

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ.

ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತನೇ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

WhatsApp Image 2024 10 22 at 1.15.09 PM 1

ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್‌ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.

Advertisements

ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಎಎಸ್‌ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಇದನ್ನು ಓದಿದ್ದೀರಾ? ಮಳೆ ಸುರಿದಷ್ಟು ಅಧಿಕಾರಸ್ಥರ ಜೇಬಲ್ಲಿ ಹಣದ ಹೊಳೆ; ಬೆಂಗಳೂರು ನಿವಾಸಿಗಳಿಗೆ ತಪ್ಪದ ನರಕ!

ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ತಂಡದ ನೆರವಿನಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2024 10 22 at 1.15.08 PM
WhatsApp Image 2024 10 22 at 1.15.10 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X