ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು ಕಟ್ಟಿಕೊಂಡು ಪರಸ್ಪರ ಹೊಡೆದಾಡಿಕೊಂಡ ಘಟನೆಗೆ ಸಂಬಂಧಿಸಿ 11 ಮಂದಿ ಹಾಗೂ ಇತರರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ನ.8ರಂದು ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟಾಗ್ರಾಂ ಮತ್ತು ವಾಟ್ಸ್‌ಆ್ಯಪ್‌ಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯುವಕರ ಗುಂಪೊಂದು ಪರಸ್ಪರ ಹೊಡೆದಾಡುತ್ತಿರುವ ದೃಶ್ಯಾವಳಿಗಳು ವೈರಲ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಣಿಪಾಲ ಪೊಲೀಸ್ ಠಾಣೆಯ ಸಿದ್ದೇಶಿ ಜಿ.ಆರ್. ಅವರು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಸಾರ್ವಜನಿಕರು ಹಾಗೂ ಮಾಹಿತಿದಾರರ ಮೂಲಕ ವಿಚಾರಣೆ ನಡೆಸಿ ಹೊಡೆದಾಟದಲ್ಲಿ ಭಾಗಿಯಾದವರ ಗುರುತನ್ನು ಪತ್ತೆಹಚ್ಚಿದ್ದಾರೆ.

ಆರೋಪಿಗಳನ್ನು ಆರ್ಷ್ ಅಮಿತ್ ಶಂಕರ್, ಉತ್ಕರ್ಷ್, ವಿನಾಯಕ ಭಾರದ್ವಾಜ್, ವೇದಾಂತ್ ಶಂಕರ್, ಚೇತನ್, ಅಕ್ಷತ್ ಸಿಂಗ್, ಲಿನ್ ಪೊರ್ಡ್ ಲೆನಾಕ್ಸ್, ಅನುರಾಗ್ ಮುಖರ್ಜಿ, ಶುಭಂ ನಂದಿ, ಅರ್ಜುನ್ ಶಾ ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಇವರು ಯಾವುದೋ ಕಾರಣಕ್ಕೆ ಪರಸ್ಪರ ಹೊಡೆದಾಡಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗುಂಪು ಸೇರಿ ಬೈಕ್‌ಗಳನ್ನು ನಿಲ್ಲಿಸಿಕೊಂಡು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಅಲ್ಲದೆ, ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡಿ ಭೀತಿ ಸೃಷ್ಟಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 183/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194(2) ಮತ್ತು 292ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹಜರತ್ ಟಿಪ್ಪು ಸುಲ್ತಾನರ 276ನೇ ಜಯಂತಿ ಆಚರಣೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್ ರವರ 276ನೇ...

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ: ಕಬ್ಬು, ಗೋವಿನಜೋಳ ಬೆಂಕಿಗಾಹುತಿ!

ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ ಬೂದಿಯ ಮಳೆ!

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು...