ಉಡುಪಿ | ಜನಪ್ರತಿನಿಧಿಗಳ ನಿರ್ಲಕ್ಷ್ಯ: ಹದಗೆಟ್ಟ ಮುಖ್ಯ ರಸ್ತೆ; ದುರಸ್ತಿಗೆ ಸ್ಥಳೀಯರ ಆಗ್ರಹ

Date:

ಕರಾವಳಿಯಲ್ಲಿ ಮಳೆ ಸ್ವಲ್ಪಮಟ್ಟಿಗೆ ನಿಂತಿದೆ. ಆದರೆ ಕೆಸರುಮಯವಾದ ರಸ್ತೆ, ಹೊಂಡ ಗುಂಡಿಗಳು ತುಂಬಿಕೊಂಡಿರುವ ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಬಗ್ಗೆ ಪ್ರತಿನಿತ್ಯದ ಗೋಳು ತಪ್ಪಿದ್ದಲ್ಲ. ಅಂತಹದ್ದೇ ಗೋಳು ಉಡುಪಿ ನಗರದ ಮಣಿಪಾಲದ ಶಾಂತಿನಗರದ ಮುಖ್ಯ ರಸ್ತೆಯಲ್ಲಿಯೂ ಇದೆ.

- Advertisement -

ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಶಾಂತಿನಗರದ ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ದುರಸ್ತಿ ಮಾಡುವಂತೆ ಸ್ಥಳೀಯರಿಂದ ಆಗ್ರಹ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದು ವಾಹನಗಳು ಸಂಚರಿಸಲಾಗದ ಪರಿಸ್ಥಿತಿ ಎದುರಾಗಿದೆ. ಸಂಬಂಧಪಟ್ಟವರು ರಸ್ತೆಯನ್ನು ದುರಸ್ತಿ ಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು, “ರಸ್ತೆಯ ಅವ್ಯವಸ್ಥೆಯಿಂದ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆಯ ಅಕ್ಕಪಕ್ಕದ ಮನೆಗಳಿಂದ ಬಟ್ಟೆ ತೊಳೆದ ನೀರು, ಸ್ನಾನ ಮಾಡಿದ ಕಲ್ಮಷ ನೀರು ರಸ್ತೆಗಳಿಗೆ ಹರಿದು ಬರುತ್ತಿರುವುದು ಕಂಡುಬಂದಿದೆ. ಇದರಿಂದ ಪರಿಸರದಲ್ಲಿ ಗಬ್ಬುವಾಸನೆ ಹರಡಿದ್ದು, ಮೂಗು ಮುಚ್ಚಿಕೊಂಡು ತಿರುಗಾಡಬೇಕಾದ ಸ್ಥಿತಿ ಎದುರಾಗಿದೆ” ಎಂದು ತಿಳಿಸಿದರು.

“ಗಲೀಜು ನೀರಿನಿಂದಾಗಿ ಮಾರಕ ಸೊಳ್ಳೆಗಳು ಕೂಡ ಹುಟ್ಟುತ್ತಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು ಈ ರಸ್ತೆಯಿಂದ ನಡೆದು ಸಾಗುವಾಗ, ಚಲಿಸುವ ವಾಹನಗಳ ಚಕ್ರದಿಂದ ಕೊಳಚೆ ನೀರನ್ನು ಮೈಮೇಲೆ ಎರಚಿಸಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಇಲ್ಲಿಯ ಸಮಸ್ಯೆಯನ್ನು ಜನಪ್ರತಿನಿಧಿಗಳ, ಅಧಿಕಾರಿ ವರ್ಗದವರ ಗಮನಕ್ಕೆ ತಂದರೂ ಯಾರೊಬ್ಬರು ಎಚ್ಚೆತ್ತುಕೊಳ್ಳದೆ ಮೌನರಾಗಿದ್ದಾರೆ” ಎಂದು ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯು ಶಾಂತಿನಗರದ ಮುಖ್ಯರಸ್ತೆ ಸನಿಹ ಇದೆ. ಆದರೂ ಒಮ್ಮೆ ಕೂಡ ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. ಒಂದು ವೇಳೆ ಜಿಲ್ಲಾಧಿಕಾರಿ ಇಲ್ಲಿನ ರಸ್ತೆಯ ಅವ್ಯವಸ್ಥೆಯ ಬಗ್ಗೆ ಗಮನಹರಿಸಿದರೆ, ಸಮಸ್ಯೆಗೆ ಬೇಗನೆ ಮುಕ್ತಿ ದೊರೆಯುತ್ತಿತ್ತು ಎಂಬ ಭರವಸೆಯಲ್ಲಿದ್ದೇವೆ ಎಂದು ಸ್ಥಳೀಯರು ಈ ದಿನ.ಕಾಮ್‌ ಜೊತೆಗೆ ಹೇಳಿಕೊಂಡರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅವಾಚ್ಯ ನಿಂದನೆ ಆರೋಪ: ಸರ್ಕಾರಿ ವೈದ್ಯರಿಗೆ ಹಲ್ಲೆ; ಒಪಿಡಿ ಬಂದ್, ಪ್ರತಿಭಟನೆ

ಒಟ್ಟಿನಲ್ಲಿ, ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರ ಗೋಳು ತಪ್ಪಿದ್ದಲ್ಲ. ಲಕ್ಷಾತಂರ ರುಪಾಯಿ‌ ಟ್ಯಾಕ್ಸ್ ಕಟ್ಟಿ ಸಹ ನೆಟ್ಟಗಿನ ರಸ್ತೆ ವ್ಯವಸ್ಥೆ ಇಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ರಸ್ತೆಯ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಆಗಲೇಬೇಕು ಎಂದು ಶಾಂತಿನಗರದ ಮುಖ್ಯ ರಸ್ತೆಯ ನಿವಾಸಿಗಳು ಆಗ್ರಹಿಸಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...