ಉಡುಪಿ | ಮಣಿಪುರ ಹಿಂಸಾಚಾರ: ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ಆಗ್ರಹ

Date:

ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಿಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು ಎಂದು ವೆಲ್‌ಫೇರ್‌ ಪಾರ್ಟಿ ಆಫ್‌ ಇಂಡಿಯಾ ಆಗ್ರಹಿಸಿದೆ.

- Advertisement -

ಉಡುಪಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ವೆಲ್‌ಫೇರ್‌ ಪಾರ್ಟಿಯ ಮುಖಂಡರು, “ಮಣಿಪುರದಲ್ಲಿ ಕಳೆದ ಎರಡೂವರೆ ತಿಂಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 6000ಕ್ಕೂ ಹೆಚ್ಚು ಮಂದಿ ಜೀವ ಭಯದಿಂದ ವಲಸೆ ಹೋಗಿದ್ದಾರೆ. ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಅಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮಹಿಳೆಯೊಬ್ಬರನ್ನು ಮುಖದ ಮೇಲೆ ಗುಂಡಿಟ್ಟು ಕೊಲ್ಲಲಾಗಿದೆ. ಇನ್ನೊಂದೆಡೆ, ದೇಶವೇ ತಲೆತಗಿಸುವ ಘಟನೆಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ತೆ ಸಂಪೂರ್ಣ ಹದಗೆಟ್ಟಿದೆ, ರಾಜ್ಯ ಸರ್ಕಾರ ಜನರ ಜೀವ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಪರೋಕ್ಷವಾಗಿ ಅತ್ಯಾಚಾರಿಗಳಿಗೆ, ಕೊಲೆಗಡುಕರಿಗೆ ಮತ್ತು ದರೋಡೆಕೋರರಿಗೆ ಬೆಂಬಲಿಸುತ್ತಿದೆಯಾ ಎಂಬ ಅನುಮಾನ ಮೂಡುತ್ತಿದೆ” ಎಂದು ಹೇಳಿದ್ದಾರೆ.

ಮಣಿಪುರ ಹಿಂಸಾಚಾರ ತಡೆಯಲು ರಾಷ್ಟ್ರಪತಿಗಳುಮಧ್ಯ ಪ್ರವೇಶಿಸಬೇಕು. ಆ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯ ಬದುಕಿಗಾಗಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಹೇರಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ, ಜಿಲ್ಲಾ ಉಪಾಧ್ಯಕ್ಷ ವಿಜಯ, ಮಾಜಿ ಜಿಲ್ಲಾ ಉಪಾಧ್ಯಕ್ಷ, ಶಹಜಹಾನ್ ತೋನ್ಸೆ, ಮಾಜಿ ಜಿಲ್ಲಾಧ್ಯಕ್ಣ ಅನ್ವರ್ ಅಲಿ ಕಾಪು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...