ಉಡುಪಿ‌ | ಕಾರ್ಕಳ ಪಡುಬಿದ್ರಿ ಟೋಲ್ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

Date:

Advertisements

ಉಡುಪಿ ಜಿಲ್ಲೆಯ ಕಾರ್ಕಳ ಪಡುಬಿದ್ರಿ ಟೋಲ್‌ ಸಂಗ್ರಹಣಾ ಕೇಂದ್ರವನ್ನು ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಇದನ್ನು ಶಾಶ್ವತವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್‌ಗೇಟ್‌ ಹೋರಾಟ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಸಿತು.

ಈ ವೇಳೆ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಲೋಕೋಪಯೋಗಿ ಇಲಾಖೆ ಸಚಿವರು ಈಗಾಗಲೇ ತಾತ್ಕಾಲಿಕ ರದ್ದು ಎಂಬ ಆದೇಶ ಹೊರಡಿಸಿದ್ದಾರೆ. ಆದರೆ ಈ ಅದೇಶ ಶಾಶ್ವತ ರದ್ದಾಗಬೇಕು. ರಾಜ್ಯಪತ್ರದಲ್ಲಿ, ಆದೇಶ ಪತ್ರದಲ್ಲಿ ಇದನ್ನು ಪ್ರಕಟಿಸಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು” ಎಂದರು.

IMG 20240824 WA0054 1

ಹೋರಾಟ ಸಮಿತಿ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಮಾತನಾಡಿ, “ನಮ್ಮ ಊರಿಗೆ ಬಂದಿರುವ ಟೋಲ್‌ಗೇಟ್‌ ಎಂಬ ಕಂಟಕವನ್ನು ಒದ್ದೋಡಿಸುವ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈಜೋಡಿಸಿರುವುದು ಹೋರಾಟಕ್ಕೆ ಬಲ ಬಂದಿದೆ. ಕಾರ್ಯಾದೇಶಕ್ಕೆ ತಾತ್ಕಾಲಿಕ ತಡೆ ಸ್ವಾಗತಾರ್ಹವೇ ಆಗಿದ್ದು, ಕಾರ್ಕಳ–ಪಡುಬಿದ್ರಿ ನಡುವಿನ ರಸ್ತೆಯಿಂದ ಸಂಪೂರ್ಣ ಎತ್ತಂಗಡಿಯಾಗುವವರೆಗೂ ಈ ಹೋರಾಟ ಮುಂದುವರಿಯಲಿದೆ. ರಾಜ್ಯ ಸರ್ಕಾರ ಕೂಡಲೇ ಸಂಪೂರ್ಣ ರದ್ದುಪಡಿಸಿ ಆದೇಶ ಹೊರಡಿಸಬೇಕು” ಎಂದು ಆಗ್ರಹಿಸಿದರು.‌

Advertisements

ಕೇಮಾರು ಸಾಂದೀಪನಿ ಸಾಧನಾಶ್ರಮದ ಈಶವಿಠಲದಾಸ ಸ್ವಾಮೀಜಿ ಮಾತನಾಡಿ, “ಟೋಲ್ ಹೋರಾಟವು ಜನರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ. ಇಲ್ಲಿ ಎಲ್ಲ ಪಕ್ಷಗಳು ಹಾಗೂ ಎಲ್ಲ ಜಾತಿಯ ಜನರೂ ಒಗ್ಗೂಡಿದ್ದು, ರಾಜಕೀಯ ರಹಿತ ಹೋರಾಟಕ್ಕೆ ಸರ್ಕಾರವೂ ತಲೆಬಾಗುವುದು ನಿಶ್ಚಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಟೋಲ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ನಾವೆಲ್ಲರೂ ಒಗ್ಗೂಡೋಣ” ಎಂದರು.

IMG 20240824 WA0054 2

ಉಡುಪಿ ಶಾಸಕ ಯಶಪಾಲ್ ಸುವರ್ಣ, ವಿಧಾನ ಪರಿಷತ್‌ ಸದಸ್ಯ ಡಾ.‌ ಧನಂಜಯ ಸರ್ಜಿ, ಮಾಜಿ ಶಾಸಕರಾದ ಲಾಲಾಜಿ ಆ‌ರ್ ಮೆಂಡನ್, ಕೆ ರಘುಪತಿ ಭಟ್, ಪ್ರಮುಖರಾದ ಯೋಗೀಶ್‌ ಶೆಟ್ಟಿ ಬಾಲಾಜಿ, ಮುನಿಯಾಲು ಉದಯ ಕುಮಾ‌ರ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಅನ್ಸಾರ್ ಅಹಮದ್ ಮೊದಲಾದವರು ಮಾತನಾಡಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

IMG 20240824 WA0051

ಕೆಎಂಎಫ್ ಅಧ್ಯಕ್ಷ ಕೆ ಸುಚರಿತ ಶೆಟ್ಟಿ, ಮಧ್ವರಾಯ ಭಟ್ ನಂದಿಕೂರು, ಮುಖಂಡರಾದ ಸತೀಶ್ ಶೆಟ್ಟಿ ಮುಟ್ಟುಪಾಡಿ, ಕುಯಿಲಾಡಿ ಸುರೇಶ್ ನಾಯಕ್, ಸಾಂತೂರು ಭಾಸ್ಕರ ಶೆಟ್ಟಿ, ರಾಮಕೃಷ್ಣ ಶರ್ಮ ಬಂಟಕಲ್ಲು, ಅನ್ಸಾರ್ ಅಹಮದ್‌ ಉಡುಪಿ, ರೇಷ್ಮಾ ಉದಯ ಶೆಟ್ಟಿ, ನವೀನ್ ಚಂದ್ರಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಉದಯ್ ಶೆಟ್ಟಿ ಇನ್ನ, ದೀಪಕ್ ಕೋಟ್ಯಾನ್‌ ಇನ್ನ, ಶೀಲಾ ಕೆ ಶೆಟ್ಟಿ ಎರ್ಮಾಳು, ವೆಂಕಟರಮಣ ಮುಚ್ಚಿಂತಾಯ, ದಿನೇಶ್ ಕೋಟ್ಯಾನ್ ಪಲಿಮಾರು, ದಿನಕರ ಬಾಬು, ಅಶೋಕ್‌ ಕುಮಾ‌ರ್ ಶೆಟ್ಟಿ, ಶಶಿಧರ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಸದಾಶಿವ ಶೆಟ್ಟಿ, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಶಶಿಕಾಂತ್ ಪಡುಬಿದ್ರಿ, ಲಕ್ಷ್ಮಣ ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಶಶಿಕಲಾ ಸೇರಿದಂತ ಬಹುತೇಕರು ಇದ್ದರು.

IMG 20240824 WA0052
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X