ಉಡುಪಿ | ನಕಲಿ ದಾಖಲೆ ಸೃಷ್ಟಿಸಿ ಸಾವಿರಕ್ಕೂ ಅಧಿಕ ಮಂದಿಗೆ ₹28 ಕೋಟಿ ಮೋಸ!

Date:

Advertisements

ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಾಲ ಪಡೆದು ಸ್ವಂತ ಬಳಕೆಗೆ ಉಪಯೋಗಿಸಿ ಲಕ್ಷಾಂತರ ರೂ. ವಂಚನೆ ಎಸಗಿರುವ ಮಲ್ಪೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್‌ ಅಧ್ಯಕ್ಷರು, ವ್ಯವಸ್ಥಾಪಕ ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಹತ್ತು ಮಂದಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ಸಂತ್ರಸ್ತರಾದ ಕೊಳಲಗಿರಿ ಲಕ್ಷ್ಮೀನಗರದ ವಿಶ್ವನಾಥ ಹಾಗೂ ಸುಕೇಶ್ ತಿಳಿಸಿದ್ದಾರೆ.

ಉಡುಪಿಯ ಖಾಸಗಿ ಹೋಟೆಲ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಕೊರೋನಾ ಕಾಲದಲ್ಲಿ ಅಂದರೆ 2021ರ ಜೂನ್ ತಿಂಗಳಲ್ಲಿ ಮನೆಗೆ ಬಂದು, ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು, ಯಾವುದೇ ದಾಖಲೆಗಳಿಗೆ ಸಹಿ ಪಡೆಯದೆ 20,000ರೂ. ಸಾಲ ನೀಡಿದ್ದು, ತಿಂಗಳಿಗೆ 900ರೂ. ಬ್ಯಾಂಕಿಗೆ ಪಾವತಿಸುವಂತೆ ತಿಳಿಸಿದ್ದರು. ಇದೇ ಸಮಯದಲ್ಲಿ ಇವರು ದೀಪಕ್, ಮಿಥುನ್, ವಾರಿಜಾ, ರೆಹನಾ, ನಸೀಮ ಹಾಗೂ ಇತರ ಹಲವು ಮಂದಿಗೆ ಇದೇ ರೀತಿ ಸಾಲ ಕೊಟ್ಟಿದ್ದರು ಎಂದರು.

ನಂತರ ನಾವು ಸಾಲದ ಹಣವನ್ನು ತಿಂಗಳಿಗೆ ಸರಿಯಾಗಿ ಕಟ್ಟಿಕೊಂಡು ಬಂದಿದ್ದೆವು. ಬಳಿಕ ಬ್ಯಾಂಕಿನಿಂದ ನೋಟಿಸು ಬಂದಿದ್ದು, ಮಲ್ಪೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದಾಗ ನಮ್ಮ ಖಾತೆಯಿಂದ 2 ಲಕ್ಷ ರೂ. ಸಾಲ ಪಡೆದಿದ್ದು, ಕೂಡಲೆ ಪಾವತಿಸುವಂತೆ ಸಿಬ್ಬಂದಿ ತಿಳಿಸಿದ್ದರು. ಈ ಬಗ್ಗೆ ವ್ಯವಸ್ಥಾಪಕರು ಕೂಡ ಸರಿಯಾಗಿ ಉತ್ತರ ನೀಡಿಲ್ಲ. ಈ ಬಗ್ಗೆ ಅಧ್ಯಕ್ಷರಲ್ಲಿ ಈ ಮೋಸದ ಬಗ್ಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದರು.

Advertisements
ಕಕಕ 2

ಈ ಮಧ್ಯೆ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಬ್ಯಾಂಕ್‌ನವರು ಪದೇ ಪದೇ ನೋಟಿಸ್ ನೀಡಿ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿದ್ದರು. ನಮ್ಮಿಂದ ಆಧಾರ್ ಹಾಗೂ ಪಾನ್ ಕಾರ್ಡ್ ಪಡೆದು ಕ್ರಿಮಿನಲ್ ಸಂಚು ರೂಪಿಸಿ ನಮ್ಮ ನಕಲಿ ಸಹಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನಮ್ಮ ಹೆಸರಿನಲ್ಲಿ ಸಾಲ ಪಡೆದು ಅದನ್ನು ಸ್ವಂತ ಬಳಕೆಗೆ ಉಪಯೋಗಿಸಿ ಮೋಸ ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಅರೆಬರೆ ರಸ್ತೆ ಕಾಮಗಾರಿ : ಗ್ರಾಮಸ್ಥರಿಂದ ಆಕ್ರೋಶ; ಅಧಿಕಾರಿಗಳಿಗೆ ಹಿಡಿಶಾಪ

ನಾವು ಪಡೆದ 20 ಸಾವಿರ ರೂ. ಸಾಲದ ಹಣವನ್ನು ಬ್ಯಾಂಕಿಗೆ ವಾಪಾಸ್ ನೀಡಲು ನಾವು ಸಿದ್ಧರಿದ್ದೇವೆ. ಈ ಪ್ರಕರಣದಿಂದ ನಮ್ಮ ಮಕ್ಕಳ ಶಿಕ್ಷಣ ಸಾಲ ಹಾಗೂ ಬ್ಯಾಂಕ್ ವ್ಯವಹಾರಗಳಲ್ಲಿ ನಮಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ಕೋಟ ಮಾತನಾಡಿ, ಈ ರೀತಿ ಸಾಲದ ಹೆಸರಿನಲ್ಲಿ 1413 ಮಂದಿಗೆ 28 ಕೋಟಿ ರೂ. ಹಣವನ್ನು ಮೋಸ ಮಾಡಲಾಗಿದೆ. ಈ ಮೋಸದ ಜಾಲದಲ್ಲಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ವ್ಯವಸ್ಥಾಪಕರ ಆತ್ಮಹತ್ಯೆಗೆ ಕಾರಣರಾದವರನ್ನು ಉನ್ನತ ಮಟ್ಟದ ತನಿಖೆ ನಡೆಸಿ ಮೋಸ ಹೋದವರಿಗೆ ಹಾಗೂ ಮೃತ ವ್ಯವಸ್ಥಾಪಕರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X