ಉಡುಪಿ‌ | ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿಗಳನ್ನು ತಂದು ಬಿಟ್ಟವರ ವಿರುದ್ಧ ಸೂಕ್ತ ಕ್ರಮ ಜಾರಿ

Date:

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ, ಬೀದಿ ನಾಯಿಗಳಿಗೆ ಅನಧಿಕೃತವಾಗಿ ರಸ್ತೆಯ ಚರಂಡಿಗಳ ಮೇಲೆ, ಶಾಲಾ ವಠಾರದಲ್ಲಿ, ಜನ ನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಸಾರ್ವಜನಿಕರು ಆಹಾರ ಹಾಕಬಾರದು.

- Advertisement -

ನಗರಸಭೆಯಿಂದ ಪ್ರಾಥಮಿಕ ಹಂತದಲ್ಲಿ ಬೀಡಿನ ಗುಡ್ಡೆ ಹಿಂದೂ ರುದ್ರ ಭೂಮಿ ಎದುರುಗಡೆ, ಆದಿ ಉಡುಪಿ ಮಾರುಕಟ್ಟೆ ಹಿಂಬದಿ, ಇಂದ್ರಾಳಿ ಹಿಂದೂ ರುದ್ರ ಭೂಮಿ ಎದುರುಗಡೆ, ಪರ್ಕಳ ಸ್ವಾಗತ ಗೋಪುರದ ಹತ್ತಿರ, ನಿಟ್ಟೂರು ಕೊಳಚೆ ನೀರು ಶುದ್ದೀಕರಣ ಘಟಕದ ಎದುರುಗಡೆ, ಪೆರಂಪಳ್ಳಿ ಮುಖ್ಯ ರಸ್ತೆಯ ಭರತೀಯ ವಿಕಾಸ ಟ್ರಸ್ಟ್ ಕೆಳಗಡೆ, ‘ರಾಜ್ ಫಿಶ್ ಮಿಲ್ ಹತ್ತಿರ, ಆದಿ ಉಡುಪಿ ಮಲ್ಪೆ ರಸ್ತೆಯ ಹೆಲಿಪ್ಯಾಡ್ ಹತ್ತಿರ, ಕಕ್ಕುಂಜೆ ನಾರಾಯಣ ನಗರ ಹೋಗುವ ರಸ್ತೆಯ ತಿರುವು ಬಳಿ ಹಾಗೂ ಬೈಲೂರು ಹನುಮಾನ್ ಗ್ಯಾರೇಜ್ ಡಯಾನ ರಸ್ತೆ ವಿಜಯ ವೀರ ಸಂಘದ ಹತ್ತಿರ ನಿಯಮಾನುಸಾರ ಷರತ್ತು ವಿಧಿಸಿ, ಬೀದಿ ನಾಯಿಗಳಿಗೆ ಆಹಾರ ಹಾಕಲು ಅನುಮತಿಯನ್ನು ನೀಡಲು ಸ್ಥಳಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ಇತರೆ ಯಾವುದೇ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ಹಾಕಲು ಸಾರ್ವಜನಿಕರು ಮುಂದೆ ಬಂದಲ್ಲಿ ನಗರಸಭಾ ಕಛೇರಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಲ್ಲಿ, ಪರಿಶೀಲಿಸಿ ಅನುಮತಿ ನೀಡಲು ಕ್ರಮವಹಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ದಿನಕ್ಕೆ 20 ಸಿಗರೇಟು ‘ಉಚಿತ’ ಕೊಡುಗೆ! ‘ವಿಷ’...

ಪ್ರತಿ ವರ್ಷ ನವೆಂಬರ್ ಬಂತೆಂದರೆ ದೆಹಲಿ ಜಗತ್ತಿನ ಅತಿ ದೊಡ್ಡ ಗ್ಯಾಸ್ ಚೇಂಬರ್ ಆಗುತ್ತದೆ. ಟಿವಿ ತೆರೆದರೆ ನ್ಯಾಯಾಲಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತದೆ. ಸರ್ಕಾರ ಮತ್ತೊಂದು ಸರ್ಕಾರವನ್ನು ದೂರುತ್ತದೆ. ಪಂಜಾಬ್ ಹರಿಯಾಣದ ಕಡೆ...

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವವರಿಗೆ ಅನುಮತಿ ಹಾಗೂ ಗುರುತಿನ ಚೀಟಿ ಕಡ್ಡಾಯವಾಗಿದ್ದು, ಆಹಾರ ಹಾಕುವವರು ನಗರಸಭೆಯ ಕಛೇರಿಯಿಂದ ಲಿಖಿತ ಮೂಲಕ ಅರ್ಜಿಯನ್ನು ನೀಡಿ ನಿಯಮಾನುಸಾರ ಅನುಮತಿ ಪಡೆದುಕೊಳ್ಳಬೇಕು. ಬೀದಿ ನಾಯಿಗಳಿಗೆ ಆಹಾರ ಹಾಕುವವರೇ ಸದ್ರಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಮನೆಗಳಲ್ಲಿ ನಾಯಿ ಸಾಕುವವರು ನಾಯಿಗಳ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸಾರ್ವಜನಿಕರು ಮನೆಗಳಲ್ಲಿ ಸಾಕುವ ನಾಯಿಗಳಿಗೆ ರೇಬಿಸ್ ಲಸಿಕೆ ಹಾಗೂ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಬೇಕು. ಜೊತೆಗೆ ಸಾಕು ನಾಯಿಗಳಿಗೆ ಬೆಲ್ಟ್ ಅಳವಡಿಸಬೇಕು.
ಯಾವುದೇ ಸಾಕು ನಾಯಿಗಳನ್ನು ಹಾಗೂ ಅದರ ಮರಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ತಂದು ಬಿಟ್ಟಿರುವುದು ಕಂಡು ಬಂದಲ್ಲಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...