ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್‌ಗೆ 14 ದಿನ ನ್ಯಾಯಾಂಗ ಬಂಧನ

Date:

Advertisements

ಕಳೆದ ನ.12ರಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು, ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆಯನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಈ ವೇಳೆ ಆರೋಪಿಯನ್ನು ನ.28ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು.

Advertisements

ಪ್ರವೀಣ್ 14 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ. ಹೀಗಾಗಿ, ಆರೋಪಿಯನ್ನು ನ.28ರವರೆಗೆ ಕಸ್ಟಡಿಯಲ್ಲಿ ಇಟ್ಟುಕೊಳ್ಳುವ ಅಗತ್ಯ ಇಲ್ಲ ಎಂಬುದನ್ನು ಮನಗಂಡ ಪೊಲೀಸರು, ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಳಿಕ ಆರೋಪಿಯನ್ನು ಪ್ರಕರಣದ ತನಿಖಾಧಿಕಾರಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಪ್ರಕರಣವನ್ನು ಕೈಗೆತ್ತಿಕೊಂಡ ಜಿಲ್ಲಾ ನ್ಯಾಯಾಧೀಶೆ ದೀಪಾ, ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು. ಡಿ.5ರಂದು ಮತ್ತೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರು ಆದೇಶಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್.ಎಂ.ನದಾಫ್ ಹಾಜರಿದ್ದರು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು.

ಶೀಘ್ರದಲ್ಲೇ ಆರೋಪಪಟ್ಟಿ(ಚಾರ್ಜ್ ಶೀಟ್) ಸಲ್ಲಿಕೆ ಸಾಧ್ಯತೆ
ನ.28ರವರೆಗೆ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡ ಪೊಲೀಸರಿಗೆ ಹದಿನಾಲ್ಕು ದಿನ ವಿಚಾರಣೆಗೆ ಅವಕಾಶವಿದ್ದರೂ ಕೂಡ ಶೀಘ್ರ ಗತಿಯಲ್ಲಿ ತನಿಖೆ ಮುಗಿಸಿ ಸಾಕ್ಷ್ಯಾಧಾರ ವಶಪಡಿಸಿಕೊಳ್ಳುವಲ್ಲಿ ತನಿಖಾಧಿಕಾರಿಗಳ ತಂಡ ಯಶಸ್ವಿಯಾಗಿದೆ. ಶೀಘ್ರದಲ್ಲೇ ಆರೋಪಿಯ ಬಗ್ಗೆ ಆರೋಪ ಪಟ್ಟಿ(ಚಾರ್ಜ್ ಶೀಟ್)ಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X