ಉಡುಪಿ ಕೊಲೆ ಪ್ರಕರಣ | ಆರೋಪಿ ಪ್ರವೀಣ್‌ಗೆ ಜೈಲಲ್ಲಿ ಪ್ರತ್ಯೇಕ ಸೆಲ್: ಎಸ್‌ಪಿ ಅರುಣ್

Date:

Advertisements

ಕಳೆದ ನ.12ರಂದು ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, ‘ಗಂಭೀರ ಪ್ರಕರಣವಾಗಿರುವುದರಿಂದ ಆರೋಪಿಗೆ ಪ್ರತ್ಯೇಕ ಸೆಲ್ ಜೊತೆ ಬಿಗಿ ಬಂದೋಬಸ್ತ್ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಉಡುಪಿಯ ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೇಜಾರು ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹದಿನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ. ಆತನನ್ನು ಹಿರಿಯಡ್ಕ ಜೈಲಿನಲ್ಲಿಡಲಾಗಿದ್ದು ಪ್ರತ್ಯೇಕ ಸೆಲ್ ಜೊತೆಗೆ ಬಿಗಿ ಬಂದೋಬಸ್ತ್ ಮಾಡುತ್ತೇವೆ. ಇತರ ಕೈದಿಗಳೊಂದಿಗೆ ಇಟ್ಟರೆ ದಾಳಿಯ ಸಾಧ್ಯತೆ ಇದ್ದ ಕಾರಣ ಭದ್ರತೆಯೊಂದಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ’ ಎಂದು ತಿಳಿಸಿದರು.

Praveen Kumar Chougale
ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)

ಈ ಬಗ್ಗೆ ಬಂದೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಗಂಭೀರ ಪ್ರಕರಣವಾಗಿರುವುದರಿಂದ ಪ್ರತ್ಯೇಕ ಸೆಲ್ ಜೊತೆಗೆ ಸಿಸಿಟಿವಿ ಕೂಡ ಅಳವಡಿಸುವ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಹರಿಯಾಣ | 142 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಪ್ರಾಂಶುಪಾಲನ ಬಂಧನ

ಕೊಲೆಗೈಯ್ಯಲ್ಪಟ್ಟ ನಾಲ್ವರ ಪೈಕಿ ಐನಾಝ್ ಹಾಗೂ ಆರೋಪಿ ಪ್ರವೀಣ್ ಚೌಗುಲೆ ಒಂದೇ ಕಡೆ ಕೆಲಸ ಮಾಡ್ತಾ ಇದ್ದಿದ್ದರಿಂದ ಇಬ್ಬರೂ ಸ್ನೇಹಿತರಾಗಿದ್ದರು. ಕಳೆದ ಒಂದು ತಿಂಗಳಿನಿಂದ ಐನಾಝ್ ಆತನ ಜೊತೆ ಮಾತನಾಡುತ್ತಿರಲಿಲ್ಲ. ಐನಾಝ್ ತನ್ನ ನಿಯಂತ್ರಣದಲ್ಲಿರಬೇಕೆಂಬ ಪ್ರವೀಣ್ ಮನೋಭಾವವೇ ಈ ಕೊಲೆಗೆ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಕೃತ್ಯ ನಡೆಸಿದ ಬಳಿಕ ಆಶ್ರಯ ಕೊಟ್ಟವರಿಗೆ ಕೊಲೆ ನಡೆಸಿದ ಬಗ್ಗೆ ಮಾಹಿತಿ ಇರಲಿಲ್ಲ. ಅವರು ಆರೋಪಿ ಪ್ರವೀಣ್ ಪತ್ನಿಯ ಸಂಬಂಧಿಕರಾಗಿದ್ದರು. ಸದ್ಯ ಎಲ್ಲ ತನಿಖೆ ಮುಕ್ತಾಯಗೊಳಿಸಿದ್ದೇವೆ. ವಾರದೊಳಗೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ತಿಳಿಸಿದ್ದಾರೆ.

ಕಳೆದ ನ.12ರಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್‌ ಅರುಣ್ ಚೌಗುಲೆ(39)ಗೆ ನ್ಯಾಯಾಲಯವು 14 ದಿನಗಳ ಕಾಲ(ಡಿ.5ರವರೆಗೆ) ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ಕೈದಿ ಸಂಖ್ಯೆ 8936 ಅನ್ನು ಪ್ರವೀಣ್ ಚೌಗಲೆಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X