ಉಡುಪಿ | ಹಿಂದಿ ಕಲಿಯದ ಸಂಸದ ಕೋಟ, ಕನ್ನಡದಲ್ಲೇ ಬಾಯಿಪಾಠ – ನಾಗೇಂದ್ರ ಪುತ್ರನ್‌ ವ್ಯಂಗ್ಯ

Date:

ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ ಎಂದಿದ್ದ ಸಂಸದ ಕೋಟ ಮಾತು ತಪ್ಪಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ವ್ಯಂಗ್ಯವಾಡಿದ್ದಾರೆ.

- Advertisement -

ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ರೈತರ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಬೆಳೆ ವಿಮೆಯ ಬಗ್ಗೆ ಕನ್ನಡದಲ್ಲೇ ಧ್ವನಿ ಎತ್ತಿರುವುದು ಸ್ವಾಗತಾರ್ಹ. ಆದರೆ ಆರು ತಿಂಗಳಲ್ಲೇ ಹಿಂದಿ ಕಲಿಯುತ್ತೇನೆಂದು ಚುನಾವಣೆ ವೇಳೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದ ಕೋಟ ಶ್ರೀನಿವಾಸ ಪೂಜಾರಿ ಅದೇ ಅನುಕಂಪದ ಮೇಲೆ ಸಂಸದರಾಗಿ ಅತ್ತ ಇಂಗ್ಲೀಷ್‌ ಕೂಡ ಬಾರದೆ, ಇತ್ತ ಹಿಂದಿಯೂ ಅರ್ಥವಾಗದೆ, ಹವಾಮಾನ ವರದಿ ಓದಿದಂತೆ ಓದಿ ಕುಳಿತುಕೊಳ್ಳುವ ಮೂಲಕ ಸಾರ್ವಜನಿಕ ವೇದಿಕೆಯಲ್ಲಿ ಆಡಿದ್ದ ತನ್ನ ವೈಯಕ್ತಿಕ ಮಾತನ್ನೇ ಉಳಿಸಿಕೊಳ್ಳಲಾಗದ ಸಂಸದ ಕೋಟಾ, ಕ್ಷೇತ್ರದ ಜನರಿಗೆ ನೀಡಿದ ಭರವಸೆಗಳನ್ನು ಹೇಗೆ ಈಡೇರಿಸುತ್ತಾರೆ? ಎಂದು ನಾಗೇಂದ್ರ ಪುತ್ರನ್‌ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಕಳೆದ ಲೋಕಸಭಾ ಚುವಾವಣೆ ವೇಳೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು, “ಗೆದ್ದರೆ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸುವೆ, ಆರು ತಿಂಗಳ ಅವಧಿಯಲ್ಲಿ ಹಿಂದಿ ಕಲಿತು ರಾಜ್ಯದ ಪರ ಹಿಂದಿಯಲ್ಲಿಯೇ ಭಾಷಣ ಮಾಡುವೆ,” ಎಂದಿದ್ದರು. ಆದರೆ ಈಗ ಇಂಗ್ಲಿಷ್‌ ಮೊದಲೇ ಇಲ್ಲ, ಹಿಂದಿ ಗೊತ್ತೇ ಇಲ್ಲ. ಸಂಸದರಾಗಿ ಒಂದೂವರೆ ವರ್ಷದ ಬಳಿಕವೂ ಕನ್ನಡದಲ್ಲೇ ಒಂದಿಷ್ಟು ಬರೆದುದನ್ನು ಓದಿದರು. ರಾಜ್ಯವನ್ನು ಪ್ರತಿನಿಧಿಸುವ ಒಬ್ಬ ಜನಪ್ರತಿನಿಧಿಗೆ ಮಾತೃ ಭಾಷೆಯ ಜೊತೆಗೆ ರಾಷ್ಟ್ರೀಯ ಭಾಷೆಯ ಅಗತ್ಯ ಮತ್ತು ಮಹತ್ವವನ್ನು ಕೋಟ ಅರಿಯದೇ ಇರುವುದು ವಿಪರ್ಯಾಸ. ಅನುಕಂಪದ ಅಲೆಯಲ್ಲಿ ಗೆದ್ದವರೆಲ್ಲರೂ ಸಮರ್ಥರೆನ್ನಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಂಸದ ಶ್ರೀನಿವಾಸ ಪೂಜಾರಿ ಅವರು ಉತ್ತಮ ನಿದರ್ಶನ ಎಂದು ನಾಗೇಂದ್ರ ಪುತ್ರನ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...