ಉಡುಪಿ | ಸ್ಥಳ ಪರಿಶೀಲನೆ ಮಾಡದೆ ಸಾಲ ನೀಡಿದ್ದ ಬ್ಯಾಂಕ್? ಎರಡು ಕುಟುಂಬಗಳು ಬೀದಿಪಾಲು !

Date:

ಉಡುಪಿ ಜಿಲ್ಲೆಯ ಕೋಟ ಸಮೀಪದ ಕೋಟತಟ್ಟು ಗ್ರಾಮದ ಬಾರಿಕೆರೆಯ ಮನೆಯೊಂದರಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಮನೆಯನ್ನು ಸೊಸೈಟಿಯವರು ಹರಾಜು ಹಾಕಿದ್ದಾಗಿ ಮನೆಯವರು ಆರೋಪಿಸಿದ್ದಾರೆ.

- Advertisement -

ಬಾರಿಕೆರೆಯ ನಾಗೇಂದ್ರ ಪುತ್ರನ್, ತಂದೆ ಕೃಷ್ಣ ಬಂಗೇರ ಮತ್ತು ತಾಯಿ ಜಲಜಾ ಮರಕಾಲ್ತಿ ಅವರ ಕುಟುಂಬಕ್ಕೆ ಸೇರಿದ ಮನೆ ಇದಾಗಿದೆ. ಮನೆಯ ಜೊತೆಗೆ ಸುಮಾರು 45 ಸೆಂಟ್ಸ್ ನಷ್ಟು ಜಾಗೆ ಇಲ್ಲಿತ್ತು. ಜು.14 ರಂದು ಸೋಮವಾರ ಬೆಳಿಗ್ಗೆ ಕುಟುಂಬದ ಮನೆಯಲ್ಲಿ ತುಳಸಿ ಪೂಜೆ ಮತ್ತು ಭಜನಾ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ವೇಳೆ ಸ್ಥಳೀಯ ಸೊಸೈಟಿಯವರು ನಮಗೆ ನೋಟೀಸನ್ನೂ ನೀಡದೆ ಏಕಾಏಕಿ ಹರಾಜು ಹಾಕಿದ್ದಾರೆ ಎಂದು ಕೃಷ್ಣ ಬಂಗೇರ ಪುತ್ರ ನಾಗೇಂದ್ರ ಪುತ್ರನ್ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ನಾಗೇಂದ್ರ ಪುತ್ರನ್‌, ಈ‌ ಮನೆಯು ಪಿತ್ರಾರ್ಜಿತ ಆಸ್ತಿಯಾಗಿದ್ದು ಕುಟುಂಬದ ವ್ಯಕ್ತಿಯೋರ್ವ ಹಲವು ವರ್ಷಗಳ ಹಿಂದೆ ಸೊಸೈಟಿಯಿಂದ ಸಾಲ ಪಡೆಯುವಾಗ ಅವನ ಮನೆ ನಂಬರ್ ನ್ನು ನೀಡಿ ಪಿತ್ರಾರ್ಜಿತ ಆಸ್ತಿ ಪತ್ರವನ್ನು ಅಡವಿಟ್ಟು ಸೊಸೈಟಿಯಿಂದ ಸಾಲ ಪಡೆದಿದ್ದಾನೆ. ಆದರೆ ಸಾಲ ನೀಡುವಾಗ ಸೊಸೈಟಿಯವರು ಸ್ಥಳ ಪರಿಶೀಲನೆ ಮಾಡದೆ ಸಾಲ ನೀಡಿದ್ದಾರೆ. ಇದರಿಂದಾಗಿ ಎರಡು ಕುಟುಂಬಗಳು ಬೀದಿಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜುಲೈ 12ರ ಶನಿವಾರದಂದು ಹರಾಜು ಪ್ರಕ್ರಿಯೆ ಇತ್ತು. ಆದರೆ ಅಂದು ಮಾಡಿರಲಿಲ್ಲ. ಇಂದು ಸೋಮವಾರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇದ್ದಾಗ ಏಕಾಏಕಿ ಬ್ಯಾಂಕ್ ನವರು ನೊಟೀಸನ್ನೂ ನೀಡದೆ ಬಂದು ಹರಾಜು ಹಾಕಿದ್ದಾರೆ. ನ್ಯಾಯಾಲಯದ ಮೇಲೆ ನಮಗೆ ಗೌರವ ಇದೆ. ಆದರೆ ಬ್ಯಾಂಕ್ ನವರ ಕ್ರಮದ ಬಗ್ಗೆ ನಾವು ಕಾನೂನು ಹೋರಾಟ ನಡೆಸುತ್ತೇವೆ. ಇದರ ಹಿಂದೆ ರಾಜಕೀಯ ಮುಖಂಡರ ಹಿತಾಸಕ್ತಿಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

1006210917

ಈ ದಿನ.ಕಾಮ್‌ ಜೊತೆ ಮಾತನಾಡಿದ ಕೃಷ್ಣ ಬಂಗೇರ, ನಾವು ಬಹಳಷ್ಟು ವರ್ಷಗಳಿಂದ ಇಲ್ಲಿ ವಾಸ ಮಾಡುತ್ತಿದ್ದೇವೆ. ಇವತ್ತು ಈ ರೀತಿ ನಮಗೆ ಸಮಸ್ಯೆಯಾಗಿದೆ .ನಾವಿನ್ನು ಎಲ್ಲಿಗೆ ಹೋಗುವುದು? ನಮಗೆ ಬೇರೆ ಜಾಗ ಇಲ್ಲ. ನಮಗೆ ಅನ್ಯಾಯ ಆಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಒಟ್ಟಿನಲ್ಲಿ ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷಿ ಅನುಭವಿಸುವ ಪರಿಸ್ಥತಿ ಎದುರಾಗಿದೆ. ಹಲವಾರು ವರ್ಷಗಳಿದಂದ ಹಲವು ಕನಸುಗಳನ್ನು ಹೊತ್ತು ಜೀವನ ಸಾಗಿಸುತ್ತಿದ್ದ ಕುಟುಂಬ ಬೀದಿಪಾಲಾಗುತ್ತಿದೆ. ಇಷ್ಟು ದಿನಗಳಿಲ್ಲದ ಸಮಸ್ಯೆ ಒಮ್ಮೆಲೆ ಬಂದಿದೆ ಎಂದರೆ ಇದರ ಹಿಂದೆ ರಾಜಕೀಯ ಪ್ರೇರಿತ ಶಕ್ತಿಗಳು ಸಹ ಒತ್ತಡಗಳನ್ನು ಹೇರಿದ್ದಾರೆ ಎಂದು ನಾಗೇಂದ್ರ ಪುತ್ರನ್‌ ರವರು ಹೇಳಿದ್ದಾರೆ.

1006210918 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...