ಉಡುಪಿ | ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆ, ನಗರದಾದ್ಯಂತ ಕಟ್ಟು ನಿಟ್ಟಿನ ಭದ್ರತಾ ಕ್ರಮ

Date:

ನವೆಂಬರ್‌ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಹಿನ್ನಲೆಯಲ್ಲಿ ನಗರದಾದ್ಯಂತ ಅಪಾರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಲ್ಯಾಂಡ್‌ ಆದ ನಂತರ ಬನ್ನಂಜೆ ಸರ್ಕಲ್‌ನಿಂದ ಕಲ್ಸಂಗ ಸರ್ಕಲ್‌ ವರೆಗೆ ರೋಡ್‌ ಶೋ ಆಯೋಜನೆಯಾಗಿದ್ದು, ನಂತರ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ಗೀತಾ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಇದರ ಬಳಿಕ ಮಠದ ಎದುರಿನ ಪಾರ್ಕಿಂಗ್‌ ಪ್ರದೇಶದಲ್ಲಿ ಪ್ರಧಾನಿಯವರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

- Advertisement -

ಪ್ರಧಾನಿಯ ಭೇಟಿ ಹಿನ್ನೆಲೆಯಲ್ಲಿ ಸುಮಾರು 3000ಕ್ಕೂ ಹೆಚ್ಚು ಪೊಲೀಸ್‌ ಅಧಿಕಾರಿ–ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಇವರಲ್ಲಿ 10 ಮಂದಿ ಪೊಲೀಸ್‌ ಆಯುಕ್ತರು ಸೇರಿದಂತೆ ಎಂಟಕ್ಕೂ ಹೆಚ್ಚು ಜಿಲ್ಲೆಗಳಿಂದ ಪೊಲೀಸ್‌ ಸಿಬ್ಬಂದಿಗಳನ್ನು ಕರೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಭದ್ರತಾ ವ್ಯವಸ್ಥೆಗೆ ಎಸ್‌ಪಿಜಿ ತಂಡ ನೇತೃತ್ವವಹಿಸಿದ್ದು, ತಂಡ ಈಗಾಗಲೇ ಉಡುಪಿಗೆ ಆಗಮಿಸಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್‌ ಸಿಬ್ಬಂದಿಯೂ ಅವರೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು ಬಂದೋಬಸ್ತ್‌ ವ್ಯವಸ್ಥೆಯನ್ನು ಎಡಿಜಿಪಿ ಜಿತೇಂಧ್ರ ಕುಮಾರ್‌ ಅವರ ಮೇಲ್ವಿಚಾರಣೆಯಲ್ಲಿ, ಐಜಿ ಸಂದೀಪ್‌ ಪಟೀಲ್‌ ಮತ್ತು ಐಜಿ ಚಂದ್ರಗುಪ್ತ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...