ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ – ಯು.ಜಿ 2025 ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಒಂದು ಪಾಳಿಯಲ್ಲಿ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯ ಒಟ್ಟು 2947 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪರೀಕ್ಷಾ ದಿನದಂದು ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1.30 ರ ಒಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್ ಡ್ರೈ ವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದಲ್ಲಿಯೇ ಕಲ್ಪಿಸಲಾಗಿದ್ದು, ಕುಡಿಯುವ ನೀರಿನ ಬಾಟಲ್ ಅನ್ನು ಸಹ ತೆಗೆದುಕೊಂಡು ಹೋಗುವಂತಿಲ್ಲ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ಗಳು ಮತ್ತು ಲಾಗ್ ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ಅಭ್ಯರ್ಥಿಗಳಿಗೆ ಪೆನ್‌ಗಳನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದಲೇ ನೀಡಲಾಗುವುದು.
ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಎರಡು ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಒಂದು ಪೋಸ್ಟ್ ಕಾರ್ಡ್ ಸೈಜ್ ಭಾವಚಿತ್ರ ಕಡ್ಡಾಯವಾಗಿ ತರಬೇಕು. ವಸ್ತçಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಪೂರ್ಣ ತೋಳಿನ ಉಡುಪನ್ನು ಧರಿಸುವಂತಿಲ್ಲ.
ಪಿ.ಡಬ್ಲೂಡಿ ಅಭ್ಯರ್ಥಿಗಳಿಗೆ ಹೆಚ್ಚುವರಿ 1 ಗಂಟೆ ಅಂದರೆ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯ ವರೆಗೆ ಪರೀಕ್ಷೆ ಬರೆಯಲು ಕಾಲಾವಕಾಶ ನೀಡಲಾಗಿರುತ್ತದೆ ಹಾಗೂ ಪರೀಕ್ಷಾ ಕೇಂದ್ರದಲ್ಲಿ ವ್ಹೀಲ್ ಚೇರ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿರುತ್ತದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ದೊಡ್ಡ ವಾಲ್ ಗಡಿಯಾರವನ್ನು ಅಳವಡಿಸಲಾಗುವುದು. ಪರೀಕ್ಷೆ ಪ್ರಾರಂಭವಾದ ಪ್ರತೀ ಮೂವತ್ತು ನಿಮಿಷಕ್ಕೊಮ್ಮೆ ಬೆಲ್ ಬಾರಿಸಲಾಗುವುದು.
ಅಭ್ಯರ್ಥಿಗಳು ಪರೀಕ್ಷೆ ಮುಕ್ತಾಯವಾದ ನಂತರ ಬುಕ್‌ಲೆಟ್ ಮತ್ತು ಪೆನ್‌ನೊಂದಿಗೆ ಪರೀಕ್ಷಾ ಕೇಂದ್ರದಿAದ ಹಿಂದಿರುಗಬೇಕು. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಆಂಬುಲೆನ್ಸ್ನೊಂದಿಗೆ ವೈದ್ಯಕೀಯ ಸಿಬ್ಬಂದಿಯನ್ನು ಪರೀಕ್ಷಾ ಕೇಂದ್ರಗಳಿಗೆ ನೀಯೋಜಿಸಲಾಗುವುದು.
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನಿಗಧಿಪಡಿಸಿರುವ ಸೂಚನೆಗಳನ್ನು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಷೇಧಾಜ್ಞೆ ಜಾರಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಮೇ 4 ರಂದು ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ನೀಟ್ –ಯು.ಜಿ 2025 ರ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.