ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ- ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಡಿಸಿ ಆಗಿ ನೇಮಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುತ್ತೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿ ಯಾಗಿ ನೇಮಿಸಲಾಗಿದೆ.

