ಉಡುಪಿ | ನೇಜಾರು ತಾಯಿ ಮಕ್ಕಳ ಕೊಲೆ ಪ್ರಕರಣ; ತ್ವರಿತ ವಿಚಾರಣೆ ನಡೆಸಿ ನ್ಯಾಯಕ್ಕಾಗಿ ಸಿಎಂಗೆ ಮನವಿ

Date:

Advertisements

ಉಡುಪಿ ಜಿಲ್ಲೆ ನೇಜಾರುವಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹಾಗೂ ಮುಸ್ಲಿಂ ಜಸ್ಟೀಸ್ ಫೋರಂ ನೇತೃತ್ವದ ನಿಯೋಗ ಮಂಗಳವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

“ಈ ಭೀಕರ ಹತ್ಯಾಕಾಂಡವು ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮುತುವರ್ಜಿ ವಹಿಸಿ ತ್ವರಿತಗತಿಯಲ್ಲಿ ರಹಸ್ಯವನ್ನು ಬೇಧಿಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಜಿಲ್ಲೆಯ ಇತಿಹಾಸದಲ್ಲೇ ಇದೊಂದು ಅತ್ಯಂತ ಭಯಾನಕ ಹೀನ ಅಪರಾಧವಾಗಿದ್ದು, ಜಿಲ್ಲೆಯ ಜನರಲ್ಲಿ ಅಭದ್ರತೆಯ ಭಾವನೆ ಮೂಡಿಸಿದೆ. ಈ ಕ್ರೂರ ಅಪರಾಧ ಪ್ರಕರಣಕ್ಕೆ ರಾಜ್ಯದ ಘನ ಸರ್ಕಾರವು ನ್ಯಾಯಪೂರ್ಣ ತಾರ್ಕಿಕ ಅಂತ್ಯವನ್ನು ಅತ್ಯಂತ ಶೀಘ್ರಗತಿಯಲ್ಲಿ ಕಲ್ಪಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವುದು ಅತ್ಯಂತ ಅಗತ್ಯದ ಕರ್ತವ್ಯವಾಗಿದೆ” ಎಂದು ಮನವಿಯಲ್ಲಿುಲ್ಲೇಖಿಸಿದ್ದಾರೆ.

“ರಾಜ್ಯ ಸರ್ಕಾರವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳನ್ನು ಕೂಡಲೇ ನೇಮಿಸಬೇಕು. ತ್ವರಿತಗತಿಯಲ್ಲಿ ವಿಚಾರಣೆ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ಖಾತ್ರಿ ಪಡಿಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಈ ಪ್ರಕರಣದಲ್ಲಿ ಆರೋಪಿಯನ್ನು ಸಮಗ್ರವಾಗಿ ವಿಚಾರಣೆ ನಡೆಸಿ ಈ ಕೃತ್ಯದಲ್ಲಿ ಭಾಗಿಯಾದ ಅಥವಾ ಸಹಕರಿಸಿರಬಹುದಾದ ಇತರರನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಭೀಭತ್ಸ ಕೃತ್ಯಗಳು ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಸಿಟಿವಿ ಉಡುಪಿ ಜಿಲ್ಲೆಯ ಆಯಕಟ್ಟಿನ ಜಾಗದಲ್ಲಿ ಅಳವಡಿಸಬೇಕು” ಎಂದು ಮುಖ್ಯಮಂತ್ರಿಯನ್ನು ನಿಯೋಗ ಒತ್ತಾಯಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಅಕ್ರಮ ಭೂ ಮಂಜೂರಾತಿ ಪ್ರಕರಣ; ಸ್ವಯಂ ಪ್ರೇರಿತ ದೂರು ದಾಖಲು

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಕ್ರಮದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಉಡುಪಿ ತಾಲೂಕು ಅಧ್ಯಕ್ಷ ಮುಹಮ್ಮದ್ ಇರ್ಷಾದ್, ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಂತ್ರಸ್ತ ಕುಟುಂಬದ ಯಜಮಾನ ನೂರ್ ಮುಹಮ್ಮದ್, ಸಂಬಂಧಿ ಅಶ್ರಫ್ ಕೆ, ಜಮೀಯ್ಯತುಲ್ ಫಲಾಹ್, ಅಧ್ಯಕ್ಷ ಶಾಹುಲ್ ಹಮೀದ್, ಸೆಂಟ್ರಲ್ ಮುಸ್ಲಿಂ ಕಮಿಟಿ ದ.ಕ. ಜಿಲ್ಲಾ ಕಾರ್ಯದರ್ಶಿ ಶಂಶುದ್ದೀನ್ ಸುಳ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ರಿಜ್ವಾನ್ ಅರ್ಷದ್, ಸುರೇಶ್ ಶೆಟ್ಟಿ ಗುರ್ಮೆ, ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರುಗಳಾದ ಜಿ ಎ ಬಾವ, ಎಂ ಎ ಗಫೂರ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X