ಉಡುಪಿ | ಕಟ್ಟಡದಿಂದ ಆಯಾತಪ್ಪಿ ಬಿದ್ದ ಯುವಕ ಗಂಭೀರ, ಸೂಚನೆ

Date:

ಉಡುಪಿ ನಗರದ ಕಲ್ಸಂಕದಿಂದ ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಸನಿಹದಲ್ಲಿರುವ, ಪಾಳುಬಿದ್ದಿರುವ ಬಹುಮಹಡಿ ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ‌ ಅಪರಿಚಿತ ವ್ಯಕ್ತಿಯನ್ನು, ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಶುಕ್ರವಾರ ನಡೆದಿದೆ.

- Advertisement -

ದುರ್ಘಟನೆ ಗಮನಿಸಿದ ಕಲ್ಸಂಕ ಆಟೋ ಸ್ಟ್ಯಾಂಡಿನ ಚಾಲಕರು, ಒಳಕಾಡುವರಿಗೆ ಮಾಹಿತಿ ನೀಡಿದ್ದರು. ಯುವಕನ ಕುತ್ತಿಗೆ, ಬೆನ್ನು ಮೂಳೆ ಮುರಿತಗೊಳಗಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರಕ್ಷಿಸಲ್ಪಟ್ಟ ಯುವಕನ ಹೆಸರು ಸೂರತ್ ಸಿಂಗ್ ರಾವತ್ (35ವ) ತಂದೆ ಮಾಧವನ್ ಸಿಂಗ್ ಉತ್ತರಖಂಡ ಎಂದು ತಿಳಿದುಬಂದಿದೆ. ವಾರಸುದಾರರು ತುರ್ತಾಗಿ ಉಡುಪಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕನಕಮಹಲ್ ಹೆಸರಿನಿಂದ ಕರೆಯಲ್ಪಡುವ ನಿರ್ಮಾಣ ಹಂತದಲ್ಲಿಯೇ ಪಾಳುಬಿದ್ದಿರುವ ಈ ಕಟ್ಟಡದಲ್ಲಿ ಅಸಹಜವಾಗಿ ಸಾವನಪ್ಪಿದ ಕೊಳೆತ ಶವಗಳು, ಪತ್ತೆಯಾಗಿರುವ ಹಲವಾರು ಘಟನೆಗಳು ನಡೆದಿವೆ. ಅಲ್ಲದೆ ಈ ಸ್ಥಳದಲ್ಲಿ ಅನೈತಿಕ ಚಟುವಟಿಕೆಗಳು, ವೈಶ್ಯವಾಟಿಕೆ ನಡೆಯುತ್ತಿರುವ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...