ಉಡುಪಿ | ನ. 10; ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ

Date:

Advertisements

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಆಯೋಜಿಸಲಾಗಿರುವ 2023-24ನೇ ಸಾಲಿನ ಮಾನವ ರತ್ನ ಪ್ರಶಸ್ತಿ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಕಾರ್ಯಕ್ರಮವು ನವೆಂಬರ್ 10ರ ಸಂಜೆ 6 ಗಂಟೆಗೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಲಿದೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ 2023-24ನೇ ಸಾಲಿನ ‘ಮಾನವ ರತ್ನ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಹಾಗೂ ಹಾಲಿ ಸಂಸದ ಸಸಿಕಾಂತ್ ಸೆಂಥಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ‘ಸೇವಾ ರತ್ನ’ ಪ್ರಶಸ್ತಿಗೆ ಮೂಲತಃ ಕಾರ್ಕಳದವರಾಗಿದ್ದು, ದುಬೈಯಲ್ಲಿ ಉದ್ಯಮಿಯಾಗಿರುವ ಕೆ.ಎಸ್.ನಿಸಾರ್ ಅಹ್ಮದ್ ಆಯ್ಕೆಯಾಗಿದ್ದಾರೆ. ಈ ವರ್ಷದಿಂದ ಈ ಪ್ರಶಸ್ತಿಗಳ ಜೊತೆಗೆ ಸಾಮಾಜಿಕ ಸೌಹಾರ್ದತೆಗಾಗಿ ಶ್ರಮಿಸುವವರಿಗೆ ‘ಸೌಹಾರ್ದ ರತ್ನ’ ಪ್ರಶಸ್ತಿಯನ್ನೂ ಕೊಡಲಾಗುತ್ತಿದ್ದು, ಈ ಚೊಚ್ಚಲ ಪ್ರಶಸ್ತಿಗೆ ಉಡುಪಿಯ ಕ್ರೈಸ್ತ ಧರ್ಮ ಗುರುಗಳೂ, ಸಾಮಾಜಿಕ ಹೋರಾಟಗಾರರೂ ಆಗಿರುವ ಫಾ. ವಿಲಿಯಮ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.

ಇದೇ ಸಮಾವೇಶದಲ್ಲಿ ಸಮಾಜಕ್ಕೆ ಅಪೂರ್ವ ಸೇವೆ ಸಲ್ಲಿಸಿರುವ 6 ಮಂದಿ ಹಿರಿಯ ಸಾಧಕರನ್ನು ಸನ್ಮಾನ ಕೂಡ ನಡೆಯಲಿದೆ. ಶಿಕ್ಷಣ, ಸಾಹಿತ್ಯ. ಜಾನಪದ, ಸಂಘಟನೆ, ಮತ್ತು ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿ, ಹಲವು ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರಗಳಿಗೆ ಪಾತ್ರರಾಗಿರುವ ಸಾಹಿತಿ ಮತ್ತು ವಾಗ್ಮಿ ಡಾ. ಗಣನಾಥ ಎಕ್ಕಾರ್, ಜೀವನದುದ್ದಕ್ಕೂ ಜಾತ್ಯತೀತ ಮೌಲ್ಯಗಳಿಗೆ ಬದ್ಧರಾಗಿದ್ದು, ಸ್ವಚ್ಛ ರಾಜಕೀಯ ಜೀವನವನ್ನು ನಡೆಸಿರುವ ಜಿಲ್ಲೆಯ ಈರ್ವರು ಹೆಮ್ಮೆಯ ಮಹಿಳೆಯರಾದ ಉಡುಪಿ ಜಿಲ್ಲಾ ಪಂಚಾಯತಿನ ಮಾಜಿ ಅಧ್ಯಕ್ಷೆ ಸರಸು ಡಿ. ಬಂಗೇರ ಮತ್ತು ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ಸಾಮಾಜಿಕ ನ್ಯಾಯದ ಹೋರಾಟಗಳಲ್ಲಿ ಸದಾ ಮುಂಚೂಣಿಯಲ್ಲಿರುವ ದಲಿತ ನಾಯಕ ಮತ್ತು ಸಂಘಟಕ ಅಣ್ಣಪ್ಪ ನಕ್ರೆ ಹಾಗೂ ಅನಾಥರು, ಅಸಹಾಯಕರು ಹಾಗೂ ನಿರಾಶ್ರಿತರ ಸೇವೆಗೆ ಸದಾ ಸಿದ್ಧರಾಗಿರುವ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೊಡಿ, ಕುಂದಾಪುರ ಈ ಸಂದರ್ಭದಲ್ಲಿ ಸನ್ಮಾನಿಸಲ್ಪಡಲಿದ್ದಾರೆ.

Advertisements
WhatsApp Image 2024 11 09 at 7.29.38 PM 13

ಉಡುಪಿ ಜಿಲ್ಲಾ ಉಸ್ತುವಾರಿ ಮಂತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಾನಪದ ವಿದ್ವಾಂಸ, ಸಾಹಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಪುರುಷೋತ್ತಮ ಬಿಳಿಮಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ, ಉದ್ಯಮಿ ಅಬ್ದುಲ್ಲಾ ಕುಂಞಿ ಸಮಾವೇಶವನ್ನು ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಯಾಸಿನ್ ಮಲ್ಪೆ ಪ್ರಸ್ತಾವನೆ ಹಾಗೂ ಅಭಿನಂದನಾ ಭಾಷಣ ನಿರ್ವಹಿಸಲಿದ್ದಾರೆ.

ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಬಿ.ಎಸ್.ಶರ್ಫುದ್ದೀನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಮಾಜಿ ಸಚಿವರು ಮತ್ತು ಉಡುಪಿಯ ಮಾಜಿ ಸಂಸದರುಗಳಾದ ಶ್ರೀ. ವಿನಯ ಕುಮಾರ್ ಸೊರಕೆ ಮತ್ತು ಜಯಪ್ರಕಾಶ ಹೆಗ್ಡೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ದಶಕ ಕಳೆದರೂ ಈ ಹಳ್ಳಿಗೆ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ: ಸಂಜೆಯಾದರೆ ಬೆಂಕಿಯೇ ‘ಬೆಳಕು’!

ಗೌರವ ಅತಿಥಿಗಳಾಗಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಗೌರವಾಧ್ಯಕ್ಷ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಅಬ್ದುಲ್ಲಾ ಪರ್ಕಳ, ಕರ್ನಾಟಕ ಅಲೈಡ್ ಹೆಲ್ತ್ ಕೌನ್ಸಿಲ್ ಅಧ್ಯಕ್ಷರಾದ ಯು.ಟಿ.ಇಫ್ತಿಖಾರ್, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಉದ್ಯಮಿ ಆಫ್ರೋಜ್ ಅಸ್ಸಾದಿ ದುಬೈ, ಸಹಬಾಳ್ವೆಯ ಅಧ್ಯಕ್ಷ ಕೆ. ಫಣಿರಾಜ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸುಂದರ್ ಮಾಸ್ತರ್, ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಗ್ರೇಸಿ ಕೊಯಲೋ, ಕುಂದಾಪುರದ ಕೊಡಿ ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಫಿರ್ದೌಸ್ ಉಪಸ್ಥಿತರಿರಲಿದ್ದಾರೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X