ಉಡುಪಿ | ನ.10: ದಲಿತ ಸಂಘರ್ಷ ಸಮಿತಿಯಿಂದ ‘ಭೀಮಶಕ್ತಿ ಸಮಾವೇಶ’

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

- Advertisement -

ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಸಿದ್ಧಲಿಂಗಪ್ಪ, ರಾಜ್ಯದ ಲೇಖ ಸಂಚಾಲಕ ಗ.ನ.ಅಶ್ವಥ್, ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ರಾಜ್ಯ ಸಮಿತಿ ಸದಸ್ಯ ಮಲ್ಲೆಚ್ ಅಂಬುಗ, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ. ವಸಂತ್ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲೆಯ ಹಿರಿಯ ದಸಂಸ ನಾಯಕರಾದ ಕರುಣಾಕರ ಮಾಸ್ತರ್ ಮಲ್ಪೆ, ವಿಠ್ಠಲ್ ದಾಸ್ ಬನ್ನಂಜೆ, ಎಸ್.ಎಸ್. ಪ್ರಸಾದ್, ಹೂವಪ್ಪ ಮಾಸ್ತರ್ ಕಾರ್ಕಳ, ಡಾ ಪ್ರೇಮದಾಸ್ ಸಮಾವೇಶದಲ್ಲಿ ಉಪಸ್ಥಿತರಿರಲಿದ್ದಾರೆ.

ಮಹಿಳಾ ಒಕ್ಕೂಟದ ವಸಂತಿ ಶಿವಾನಂದ್, ಗೀತಾ ಸುರೇಶ್ ಕುಮಾರ್ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ಇರಲಿದ್ದು, ಡಾ ಗಣೇಶ್ ಗಂಗೊಳ್ಳಿ, ಶಂಕರ್ ದಾಸ್ ಚೆಂಡ್ಕಳ, ರವಿ ಬನ್ನಾಡಿ ಕ್ರಾಂತಿಗೀತೆ ಪ್ರಸ್ತುತಪಡಿಸಲಿದ್ದಾರೆ.

ಇದನ್ನು ಓದಿದ್ದೀರಾ? ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಜಿಲ್ಲೆಯ ಪ್ರಗತಿಪರರು, ಸಾಮಾಜಿಕ ಹೋರಾಟಗಾರರು ಮತ್ತು ಸಂಘಟನೆಯ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಆದಿ ಉಡುಪಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ಗಂಟೆ 10-00 ರಿಂದ ಆರಂಭ ಆಗುವ ಈ ಸಮಾವೇಶದಲ್ಲಿ ಉಡುಪಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕೂಡ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...