ಉಡುಪಿ ನಾಲ್ವರ ಕೊಲೆ ಪ್ರಕರಣ: ಆಟೋದಲ್ಲಿ ಬಂದು 15 ನಿಮಿಷದೊಳಗಡೆ ಕೃತ್ಯ ಎಸಗಿದ್ದ ಆಗಂತುಕ!

Date:

Advertisements

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿ ಹರಿದಾಡುತ್ತಿದ್ದು, ಕೊಲೆಗೈದ ಆಗಂತುಕ ಆಟೋದಲ್ಲಿ ಬಂದು 15 ನಿಮಿಷದಲ್ಲಿ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ.

ಆರೋಪಿ ಸಂತೆಕಟ್ಟೆಯಿಂದ ರಿಕ್ಷಾ ಹತ್ತಿಕೊಂಡು ಬಂದು, ಮನೆಗೆ ನುಗ್ಗಿ ಈ ಕೃತ್ಯವನ್ನು 8:30ರಿಂದ 9 ಗಂಟೆಯ ಮಧ್ಯೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

auto

ಆರೋಪಿ ಕೊಲೆ ನಡೆಸುವ ಮುನ್ನ ಉಡುಪಿಯ ಆಟೋ ಡ್ರೈವರ್ ಶ್ಯಾಮ್ ಎಂಬುವವರ ಆಟೋ ರಿಕ್ಷಾದಲ್ಲಿ ಕೊಲೆಯಾದ ಹಸೀನಾ ಅವರ ಮನೆಗೆ ಆಗಮಿಸಿದ್ದಾನೆ. ಅದಕ್ಕೂ ಮುನ್ನ ದ್ವಿಚಕ್ರ ವಾಹನದಲ್ಲಿ ಬಂದಿದ್ದು, ಬಳಿಕ ಕೊಲೆ ಕೃತ್ಯ ನಡೆಸಿ, 9 ಗಂಟೆಯ ವೇಳೆಗೆ ಸಂತೆಕಟ್ಟೆ ಆಟೋ ನಿಲ್ದಾಣಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ.

Advertisements

Murder udupi

ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿರುವ ಆಟೋ ಚಾಲಕ ಶ್ಯಾಮ್ ಎಂಬುವವರು, “ಇಂದು(ನ.12 ಭಾನುವಾರ) ಬೆಳಗ್ಗೆ 8:30ರಿಂದ 9 ಗಂಟೆಯ ಮಧ್ಯೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಕ್ವೀನ್ಸ್ ರಸ್ತೆಯಲ್ಲಿ ನನ್ನ ರಿಕ್ಷಾವನ್ನು ಏರಿ, ನೇಜಾರುವಿನ ತೃಪ್ತಿ ಲೇಔಟ್‌ಗೆ ಕರೆದೊಯ್ಯುವಂತೆ ಸೂಚಿಸಿದ್ದಾನೆ. ಅದರಂತೆ ಆತನನ್ನು ತೃಪ್ತಿ ಲೇಔಟ್‌ನಲ್ಲಿ ಇದೀಗ ಕೊಲೆ ನಡೆದಿರುವ ಹಸೀನಾ ಅವರ ಮನೆಯ ಗೇಟ್ ಬಳಿ ಬಿಟ್ಟಿದ್ದೇನೆ. ಈ ನಡುವೆ ನನಗೆ ದಾರಿ ತಪ್ಪಿದಾಗ ಆತನೇ ಮನೆಯ ವಿಳಾಸವನ್ನು ಸರಿಯಾಗಿಯೇ ತಿಳಿಸಿದ್ದ’ ಎಂದು ಮಾಹಿತಿ ನೀಡಿದ್ದಾರೆ.

‘ಕೊಲೆ ನಡೆದಿರುವ ಮನೆಗೆ ನಾನು ಬಿಟ್ಟ ಬಳಿಕ 15 ನಿಮಿಷಗಳ ಅಂತರದಲ್ಲಿ ಆತ ಮತ್ತೆ ಸಂತೆಕಟ್ಟೆ ಆಟೋ ನಿಲ್ದಾಣಕ್ಕೆ ಬಂದು ಕ್ಯೂನಲ್ಲಿದ್ದ ಬೇರೊಂದು ರಿಕ್ಷಾ ಏರಿದ್ದಾನೆ. ಈ ವೇಳೆ ಆತನನ್ನು ಗುರುತಿಸಿದೆ. ಆ ವೇಳೆ ಆತನಲ್ಲಿ ನಾನು, ‘ನೀವು ಇಷ್ಟು ಬೇಗ ಬರಲಿಕ್ಕಿದ್ದಿದ್ದರೆ ನಾನೇ ಅಲ್ಲೇ ನಿಂತು ಕಾಯುತ್ತಿದ್ದೆ ಎಂದು ಹೇಳಿದೆ. ಅದಕ್ಕೆ ಆತ ಪರವಾಗಿಲ್ಲ ಎಂದ. ಅಲ್ಲದೆ, ಹತ್ತಿದ ಇನ್ನೊಂದು ರಿಕ್ಷಾ ಚಾಲಕನಿಗೆ ವೇಗವಾಗಿ ಹೋಗುವಂತೆ ಹೇಳುತ್ತಿರುವುದು ಕೇಳಿತು’ ಎಂದು ಆಟೋ ಚಾಲಕ ಶ್ಯಾಮ್ ಮಾಹಿತಿ ನೀಡಿದ್ದಾರೆ.

ಸುಮಾರು 45 ವರ್ಷ ಪ್ರಾಯದ ಆ ವ್ಯಕ್ತಿ ಕನ್ನಡ ಮಾತನಾಡುತ್ತಿದ್ದ. ಮುಖಕ್ಕೆ ಮಾಸ್ಕ್ ಧರಿಸಿದ್ದ. ಆತನ ಕಣ್ಣಿನ ಭಾಗ ಮಾತ್ರ ಕಾಣಿಸುತ್ತಿತ್ತು. ಬೋಳು ತಲೆಯ ಆ ವ್ಯಕ್ತಿ, ಬಿಳಿ ಮೈಬಣ್ಣ ಹೊಂದಿದ್ದ ಎಂದು ಆರೋಪಿಯನ್ನು ಮೊದಲು ತನ್ನ ರಿಕ್ಷಾದಲ್ಲಿ ಹತ್ತಿಸಿಕೊಂಡಿದ್ದ ಚಾಲಕ ಶ್ಯಾಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಟೋ ಚಾಲಕರ ಮಾಹಿತಿಯ ಹಿನ್ನೆಲೆಯಲ್ಲಿ ಈ ಕೃತ್ಯವನ್ನು ಪರಿಚಿತರೇ ಎಸಗಿರುವ ಕೃತ್ಯ ಶಂಕೆ ವ್ಯಕ್ತವಾಗುತ್ತಿದೆ.

ಎಲ್ಲ ಆಯಾಮಗಳಲ್ಲಿ ತನಿಖೆ: ಉಡುಪಿ ಎಸ್‌ಪಿ
ಉಡುಪಿಯ ನೇಜಾರುವಿನ ತೃಪ್ತಿ ನಗರದಲ್ಲಿ ಮುಸ್ಲಿಂ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

sp udupi 1

ಮಾಧ್ಯಮದ ಜೊತೆ ಮಾತನಾಡಿದ ಅವರು, ‘ನಾಲ್ವರನ್ನು ಕೊಲೆಗೈದಿದ್ದಾನೆ. ಘಟನೆಯಲ್ಲಿ ಮನೆಯ ಯಜಮಾನಿ ಹಸೀನಾ ಅವರ ಅತ್ತೆಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಯಜಮಾನ ವಿದೇಶದಲ್ಲಿದ್ದು, ಅವರನ್ನು ಸಂಪರ್ಕಿಸುತ್ತೇವೆ. ಮನೆಯಲ್ಲಿ ಯಾವುದೇ ವಸ್ತುಗಳು ಕಳುವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಕೊಲೆಯ ಹಿಂದಿನ ಕಾರಣ ತನಿಖೆಯಿಂದ ಗೊತ್ತಾಗಲಿದೆ’ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X