ಉಡುಪಿ | ರೈಲು ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Date:

ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನೋರ್ವ ಜಿಲ್ಲಾಸ್ಪತ್ರೆಗೆ ಸಾಗಿಸಿದ ಬಳಿಕ, ಸಾವನ್ನಪ್ಪಿರುವುದು ವೈದ್ಯರ ಪರೀಕ್ಷೆಯಿಂದ ದೃಢಪಟ್ಟಿದೆ.

- Advertisement -

ಈ ಘಟನೆಯು ಶುಕ್ರವಾರ ನಡೆದಿದ್ದು, ಮೃತದೇಹವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಕೇಂದ್ರದಲ್ಲಿ ಇಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಪೊಲೀಸರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂಗಳೂರಿನಿಂದ ಕಾರವಾರ ತೆರಳುವ ರೈಲು ಫ್ಲಾಟ್ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ. ಸ್ಟಿವನ್ ಜಾರ್ಜ್ ಎಂಬುವವರು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡುವರ ನೆರವು ಪಡೆದಿದ್ದರು.

blur

ರೈಲ್ವೆ ಇನ್ಸ್‌ಪೆಕ್ಟರ್ ಮಧುಸೂಧನ್ ಸಮಕ್ಷಮದಲ್ಲಿ ಸಮಾಜ ಸೇವಕ ನಿತ್ಯಾನಂದ ಅವರು, ಯೋಗಿಶ್, ಗಣೇಶ್, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಬೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದು ದೃಢೀಕರಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪಳ | ಮರಕುಂಬಿ ಪ್ರಕರಣ; ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಓರ್ವ ಅಪರಾಧಿ ಸಾವು

ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಸಾವಿಗೆ ಕಾರಣ ತಿಳಿದುಬಂದಿಲ್ಲ. ವೈದ್ಯಕೀಯ ಮರಣೋತ್ತರ ಪರೀಕ್ಷೆಯಿಂದ ಇನ್ನಷ್ಟೆ ತಿಳಿಯಬೇಕಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...