ಉಡುಪಿ | ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕಿಗೆ ವಂಚನೆ, ಆರೋಪಿಗಳ ಬಂಧನ !

Date:

ಬ್ಯಾಂಕ್ ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ ಕೋಟ್ಯಾನ್, ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ಸುದೀಪ್, ಏಣಗುಡ್ಡೆ ನಿವಾಸಿ ರಂಜನ್ ಕುಮಾರ್, ಪೆರ್ಡೂರು ನಿವಾಸಿ ಸರ್ವಜಿತ್ ಹೆಚ್ ಕೆ ಮತ್ತು ಮಹಾರಾಷ್ಟ್ರ ಪುಣೆ ನಿವಾಸಿ ರಾಜೇಶ್ ದಿಲೀಪ್ ಪಾಟೀಲ್ ಎಂದು ಗುರುತಿಸಲಾಗಿದೆ.

- Advertisement -

ಕಳೆದ ಅಕ್ಟೋಬರ್‌ 30ರಂದು ಕರ್ನಾಟಕ ಬ್ಯಾಂಕ್ ಕಟ್ಟಿಂಗೇರಿ ಶಾಖಾ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ, ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 74/2025, 75/2025, 76/2025, 77/2025 ಅಡಿ ಕಲಂ 316(2), 318(4), 3(5) ಬಿ.ಎನ್.ಎಸ್ – 2023 ಪ್ರಕಾರ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ದೂರು ಪ್ರಕಾರ, ಆರೋಪಿತರು ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ತೋರಿಸಿ ಬ್ಯಾಂಕ್ ನಲ್ಲಿ ಅಡಮಾನ ಇಟ್ಟು ಸಾಲ ಪಡೆದು ವಂಚನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಜಿಲ್ಲೆಯಲ್ಲಿ ಇತ್ತೀಚೆಗೆ ಇಂತಹ ನಕಲಿ ಚಿನ್ನದ ಅಡಮಾನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನಲೆಯಲ್ಲಿ, ಉಡುಪಿ ವೃತ್ತ ನಿರೀಕ್ಷಕ ಕಾಪು ಅವರ ನೇತೃತ್ವದಲ್ಲಿ ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಬೆಂಗಳೂರು, ಗೋವಾ, ಮುಂಬೈ ಮತ್ತು ದೆಹಲಿಗಳಲ್ಲಿ ಹುಡುಕಾಟ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸರು ಆರೋಪಿಗಳಿಂದ ₹4,30,000 ನಗದು, ನಕಲಿ ಹಾಲ್ಮಾರ್ಕ್ ಮಾಡಲು ಬಳಸಿದ ಲೇಸರ್ ಯಂತ್ರ ಹಾಗೂ ಕಂಪ್ಯೂಟರ್ ವಶಪಡಿಸಿಕೊಂಡಿದ್ದಾರೆ. ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ತನಿಖೆಯ ವೇಳೆ ಆರೋಪಿತರು ಬ್ರಹ್ಮಾವರ, ಹಿರಿಯಡ್ಕ ಹಾಗೂ ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿಯೂ ಇದೇ ರೀತಿಯ ನಕಲಿ ಚಿನ್ನ ಅಡಮಾನ ವಂಚನೆ ಪ್ರಕರಣಗಳಲ್ಲಿ ತೊಡಗಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಯಶಸ್ವಿ ಕಾರ್ಯಾಚರಣೆ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ (ಐಪಿಎಸ್) ಹಾಗೂ ಕಾಪು ವೃತ್ತ ನಿರೀಕ್ಷಕರಾದ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಶಿರ್ವ ಪಿಎಸ್ಐ ಮಂಜುನಾಥ ಮರಬದ, ಪಿಎಸ್ಐ ಲೋಹಿತ್ ಕುಮಾರ್ ಸಿ.ಎಸ್, ಪಡುಬಿದ್ರೆ ಪಿಎಸ್ಐ ಅನಿಲ್ಕುಮಾರ್ ಟಿ ನಾಯ್ಕ್, ಎಎಸ್ಐ ಶ್ರೀಧರ್ ಕೆ.ಜೆ. ಹಾಗೂ ಶಿರ್ವ ಮತ್ತು ಪಡುಬಿದ್ರೆ ಠಾಣಾ ಸಿಬ್ಬಂದಿ ಕಿಶೋರ್, ಮಂಜುನಾಥ, ಅರುಣ್, ಸಿದ್ದರಾಯಪ್ಪ, ನಾಗರಾಜ ಮತ್ತು ಸಿಹೆಚ್ಸಿ 68 ನಾಗರಾಜ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...