ಉಡುಪಿ ನಗರದಲ್ಲಿ ಕಳೆದ ತಡರಾತ್ರಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸರು ವಿಚಾರಣೆ ಮಾಡಿದಾಗ ಅವರನ್ನು ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಪ್ರಯತ್ನಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕೊಡವೂರಿನ ಜುಮಾದಿ ನಗರದ ಸಾಗರ್ (25) ಎಂದು ಗುರುತಿಸಲಾಗಿದೆ. ಬಂದಿತನನ್ನು ನಿನ್ನೆ ದಿನ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.