ಉಡುಪಿ | ತಲವಾರು ದಾಳಿ ಪ್ರಕರಣ, ಐವರು ಆರೋಪಿಗಳ ಬಂಧನ

Date:

ಉಡುಪಿ ನಗರದಲ್ಲಿ ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಕಳೆದ ಜನವರಿ 30ರಂದು ರಾತ್ರಿ ಮಣಿಪಾಲದ ಹೋಟೆಲೊಂದರಲ್ಲಿ ಊಟಕ್ಕೆ ತೆರಳಿದ್ದ ಯುವಕರ ನಡುವೆ ಸಂಭವಿಸಿದ ಮಾತಿನ ಚಕಮಕಿ ಬಳಿಕ ಘಟನೆ ಗಂಭೀರ ಸ್ವರೂಪ ಪಡೆದಿದೆ. ನಂತರ ಮಾತುಕತೆ ನಡೆಸುವ ನೆಪದಲ್ಲಿ ಪಿಪಿಸಿ ಕ್ರಾಸ್ ಬಳಿ ಕರೆದೊಯ್ದು ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ರಾತ್ರಿ ಸುಮಾರು 11:30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ಕೋಸ್ಟಲ್ ಚಿಕನ್ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ನಿಂತಿದ್ದ ವೇಳೆ ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ 6-7 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಬಳಸಿ ಕೊಲೆ ಯತ್ನ ನಡೆಸಲಾಗಿದೆ ಎನ್ನಲಾಗಿದೆ. ದಾಳಿಯಿಂದ ಯುವಕನ ಬಲ ಅಂಗೈ, ಮಧ್ಯದ ಬೆರಳು ಹಾಗೂ ಎಡಕೈ ಮಣಿಗಂಟು ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಕೈಗೊಂಡ ಉಡುಪಿ ನಗರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕರು ಹಾಗೂ ಪಿಎಸ್‌ಐ ನೇತೃತ್ವದ ತಂಡ ಫೆ.13ರಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಜಶಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಹುಂಡೈ ವೆನ್ಯೂ ಕಾರು (ಅಂದಾಜು ಮೌಲ್ಯ ರೂ.8 ಲಕ್ಷ) ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...