ಉಡುಪಿ | ಪೊಲೀಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು !

Date:

ಡಿಎಆ‌ರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ.

- Advertisement -

ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್‌ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಮೂರು ವಸತಿ ಸಮುಚ್ಚಯದಲ್ಲಿ ಒಟ್ಟು 28 ಮನೆಗಳಿದ್ದು, ಇದರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ರಾಘವೇಂದ್ರ ಹಾಗೂ ರವಿರಾಜ್ ಎಂಬವರ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೀಗ ತೆರೆದು ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಘವೇಂದ್ರ ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನಲ್ಲಿ ತರಬೇತಿಯಲ್ಲಿದ್ದು, ಇವರ ಮನೆಯಲ್ಲಿ ಯಾರು ಇರಲಿಲ್ಲ. ಅದೇ ರೀತಿ ರವಿರಾಜ್ ಫೆ.23ರಂದು ತಡರಾತ್ರಿ ಮನೆಗೆ ಬೀಗ ಹಾಕಿ ಕರ್ತವ್ಯಕ್ಕೆ ತೆರಳಿದ್ದರು. ಈ ವೇಳೆ ನುಗ್ಗಿದ ಕಳ್ಳರು, ರಾಘವೇಂದ್ರ ಅವರ ಮನೆಯಲ್ಲಿದ್ದ ಬೆಳ್ಳಿಯ ಕಾಲುಗೆಜ್ಜೆ ಹಾಗೂ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ರವಿರಾಜ್ ಮನೆಯಲ್ಲಿ ಯಾವುದೇ ಸೊತ್ತುಗಳು ಕಳವಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...