ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್‌ನ ಕಾರ್ಪೊರೇಟರ್ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್‌ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’
ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ.ರಾಯಪ್ಪ ಹಾಜರಿದ್ದರು. ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.
