ಉಡುಪಿ | ಮೊಸಳೆ ಕಣ್ಣೀರು ಹಾಕುವುದು ಬಿಡಿ: ಶಾಸಕ ಯಶ್ಪಾಲ್‌ಗೆ ಪ್ರಸಾದ್ ರಾಜ್ ಕಾಂಚನ್ ತಿರುಗೇಟು

Date:

ಅನುದಾನ ಬಿಡುಗಡೆಯಾಗಿಲ್ಲ ಎಂದು ಸುಳ್ಳು ಹೇಳಿಕೆಗಳನ್ನು ಹೇಳುತ್ತಾ, ಗಂಡಸುತನ ಪ್ರಶ್ನೆ ಮಾಡುವ ಹೇಳಿಕೆ ಒಬ್ಬ ಶಾಸಕನಾಗಿ ಯಶ್ಪಾಲ್ ಸುವರ್ಣರಿಗೆ ಶೋಭೆ ತರುವುದಿಲ್ಲ ಎಂದು ಉಡುಪಿಯ ಕಾಂಗ್ರೆಸ್‌ ಮುಖಂಡ ಪ್ರಸಾದ್ ರಾಜ್ ಕಾಂಚನ್ ತಿರುಗೇಟು ನೀಡಿದ್ದಾರೆ.

- Advertisement -

ಉಡುಪಿಯ ಜನತೆ ನಿಮ್ಮನ್ನ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ಅಭಿವೃದ್ದಿಗಾಗಿ ಅನುದಾನಗಳನ್ನು ತರುವ ಕೆಲಸ ಶಾಸಕನದ್ದು. ಅನುದಾನ ತರುವಲ್ಲಿ ವಿಫಲರಾಗಿರುವ ನಿಮ್ಮ ಗಂಡಸುತನ ಎಲ್ಲಿ ಹೋಗಿದೆ ಎಂದು ಕಾಂಚನ್ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇಂದ್ರದಲ್ಲಿ ನಿಮ್ಮದೆ ಬಿಜೆಪಿ ಸರ್ಕಾರ ಇದೆ ಸಾಕಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರಸ್ತೆಗೆ ಒಮ್ಮೆ ಮುಕ್ತಿ ನೀಡಿ, ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಿ. ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದೆ, ಅದಕ್ಕೆ ವೇಗ ಕೊಡುವ ಕೆಲಸ ಮಾಡ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಅನುಮತಿ ಇಲ್ಲದೆ ಬುಲ್ದೋಜರ್ ಕಾರ್ಯಾಚರಣೆಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್

ಅಭಿವೃದ್ಧಿಯ ಕೆಲಸ ಮಾಡುವುದನ್ನು ಬಿಟ್ಟು ಸದಾ ಶಾಂತಿಯಿಂದ ಕೂಡಿದ ಉಡುಪಿಯಂತಹ ಕ್ಷೇತ್ರದಲ್ಲಿ ಶಾಂತಿ ಭಂಗದಂತಹ ಹೇಳಿಕೆಗಳನ್ನು ನೀಡುವುದು, ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರ ಬಗ್ಗೆ ಅಗೌರವದ ಹೇಳಿಕೆಗಳನ್ನು ನೀಡುವುದನ್ನು ಬಿಡಿ. ಕ್ಷೇತ್ರದಲ್ಲಿ ಸೌಹಾರ್ದತೆ ಕಾಪಾಡುವ ಕೆಲಸ ಮಾಡುವುದರ ಜೊತೆಗೆ ಅನುದಾನ ತರುವ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡಿ ಎಂದು ಶಾಸಕರಿಗೆ ಉಡುಪಿಯ ಕಾಂಗ್ರೆಸ್‌ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಿವಿಮಾತು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...