ಉಡುಪಿ | ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ : ಜಿ.ಪಂ. ಸಿ.ಇ.ಓ ಪ್ರತೀಕ್ ಬಾಯಲ್

Date:

ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ
ಕಾರ್ಯನಿರ್ವಹಣಾಧಿಕಾರಿಗಳ ಪ್ರತೀಕ್ ಬಾಯಲ್ ಹೇಳಿದರು.

- Advertisement -

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರ, ಪಂಪುಚಾಲಕ, ಜವಾನ, ಸ್ವಚ್ಛತಾಗಾರ ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ನಡೆದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ನೆರವನ್ನು ಒದಗಿಸುತ್ತಿದೆ. ಇದರ ಲಾಭವನ್ನು ಪ್ರತಿಯೊಬ್ಬರೂ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಎಂದರು.

ನೌಕರರ ಭವಿಷ್ಯನಿಧಿ ಯೋಜನೆಯಲ್ಲಿ ಮುಂಗಡ ಪಡೆಯುವ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದ್ದು, ಖಾತೆದಾರರ ಒಂದು ವರ್ಷದ ಸೇವೆಯ ನಂತರ ಮನೆ ನಿರ್ಮಾಣ, ಉನ್ನತ ಶಿಕ್ಷಣ, ಮದುವೆ, ಅನಾರೋಗ್ಯ ಸೇರಿದಂತೆ ಇತರೆ ಕಾರಣಗಳಿಗೆ ಮುಂಗಡ ಆರ್ಥಿಕ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಉದ್ಯೋಗಿಗಳ ರಾಜ್ಯ ವಿಮೆ (ಇ.ಎಸ್.ಐ) ಯೋಜನೆಯಡಿ ಅನಾರೋಗ್ಯ, ಅಂಗವೈಕಲ್ಯ, ಸೇರಿದಂತೆ ಕಾರ್ಮಿಕರುಗಳಿಗೆ ವೈದ್ಯಕೀಯ ಮತ್ತು ಆರ್ಥಿಕ ಪ್ರಯೋಜನಗಳನ್ನು ಒದಗಿಸಲಿದೆ. ಈ ಎಲ್ಲಾ ಮಾಹಿತಿಗಳ ಬಗ್ಗೆ ಅರಿವು ಮೂಡಿಸಲು ಇ.ಎಸ್.ಐ ಹಾಗೂ ಇ.ಪಿ.ಎಫ್.ಓ ಖಾತೆದಾರರಿಗೆ ಕಾರ್ಯಾಗಾರ ಆಯೋಜಿಸಲಾಗಿದ್ದು, ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಇ.ಎಸ್.ಐ ಹಾಗೂ ಇ.ಪಿ.ಎಫ್.ಓ ಯೋಜನೆಯ ನಿಯಮಾವಳಿಗಳಲ್ಲಿ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತವೆ. ಇವುಗಳಿಂದ ದೊರಕುವ ಸೌಲಭ್ಯಗಳನ್ನು ಬಳಸುವ ಬಗ್ಗೆ ಪ್ರತಿಯೊಬ್ಬ ಖಾತೆದಾರರು ಮಾಹಿತಿ ಹೊಂದಿರಬೇಕು ಎಂದ ಅವರು, ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.

ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಗ್ರಾಮೀಣಾಭಿವೃದ್ಧಿಯಲ್ಲಿಯೇ ಉಡುಪಿ ಜಿಲ್ಲೆ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸದೃಢರಾಗಿದ್ದಾಗ ಮಾತ್ರ ಗ್ರಾಮ ಪಂಚಾಯತ್‌ಗಳು ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಮ ಪಂಚಾಯತ್ ಸಿಬ್ಬಂದಿಗಳ ಒಳಿತಿಗಾಗಿ ಹಾಗೂ ಅವರುಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದ ಅವರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇ.ಎಸ್.ಐ ಹಾಗೂ ಇ.ಪಿ.ಎಫ್.ಓ ಯೋಜನೆಯ ಮಾಹಿತಿ ಪಡೆದಾಗ ಮಾತ್ರ ಅದರ ಲಾಭ ಸಮರ್ಪಕವಾಗಿ ದೊರಕುತ್ತದೆ ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೊಳ್ಳಿ ಮಾತನಾಡಿ, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಹಾಗೂ ಅವರುಗಳಿಗೆ ಆರ್ಥಿಕ ಭದ್ರತೆ ಒದಗಿಸುವ ಯೋಜನೆಗಳ ಕುರಿತು ಅರಿವು ಮೂಡಿಸಲು ಕಾರ್ಯಾಗಾರ ಆಯೋಜಿಸಲಾಗಿದ್ದು, ಕಾರ್ಯಾಗಾರದ ಪ್ರಯೋಜನವನ್ನು ಪ್ರತಿಯೊಬ್ಬ ಸಿಬ್ಬಂದಿಯೂ ಪಡೆಯುವಂತಾಗಬೇಕು ಎಂದರು.

ಜಿಲ್ಲಾ ಇ.ಪಿ.ಎಫ್.ಓ ಎನ್‌ಫೋರ್ಸ್ಮೆಂಟ್ ಆಫೀಸರ್ ಸಂತೋಷ್ ಅವರು ಇ.ಪಿ.ಎಫ್.ಓ ಯೋಜನೆಯ ಬಗ್ಗೆ ಹಾಗೂ ಇ.ಎಸ್.ಐ ಬ್ರಾಂಚ್ ಮ್ಯಾನೇಜರ್ ಪ್ರಿಯಾಗಿ ಇ.ಎಸ್.ಐ ಸೌಲಭ್ಯದ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ನಿಟ್ಟೂರು ಎನ್.ಸಿ.ಹೆಚ್.ಆರ್ ಸೊಲ್ಯೂಷನ್ಸ್ ಮಾನವ ಸಂಪನ್ಮೂಲ ಸಲಹೆಗಾರ ನವೀನ್ ಚಂದ್ರ, ಜಿಲ್ಲೆಯ ಗ್ರಾಮ ಪಂಚಾಯತ್‌ಗಳ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರರು, ಪಂಪುಚಾಲಕರು, ಜವಾನರು, ಸ್ವಚ್ಛತಾಗಾರರು ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಧಿಕಾರಿ ನಿಶ್ಚಿತ್ ಹೆಗ್ಡೆ ಸ್ವಾಗತಿಸಿ, ಪಿ.ಡಿ.ಓ ಅನಿಲ್ ಕುಮಾರ್ ಶೆಟ್ಟಿ ನಿರೂಪಿಸಿ, ರವಿರಾಜ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ವಿರುದ್ಧ ಜನಾಕ್ರೋಶ; ಸಮಸ್ಯೆ ಪರಿಹಾರಕ್ಕೆ ಕಲ್ಯಾಣ ಜನಪರ ವೇದಿಕೆ ಆಗ್ರಹ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಅಕ್ಕಮಹಾದೇವಿ, ಬಸವಣ್ಣ, ಅಲ್ಲಮಪ್ರಭು ಮಾತನಾಡುವ ರೊಬೋಟಿಕ್ ಪುತ್ಥಳಿಗಳ ನಿರ್ಮಾಣ: ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ...

ಭದ್ರಾವತಿ | ಕುರಿ ಕಾಳಗದ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ನಡೆದು ಯುವಕನೊಬ್ಬನಿಗೆ...

ಬಸವಣ್ಣನವರ ಸಮಾನತೆಯ ಕನಸು ಇನ್ನೂ ನನಸಾಗಿಲ್ಲ: ಸಿದ್ದರಾಮಯ್ಯ ವಿಷಾದ

ಜಾತಿ ತಾರತಮ್ಯ, ಅಸ್ಪೃಶ್ಯತೆ, ಲಿಂಗಭೇದ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ 12ನೇ...